/newsfirstlive-kannada/media/media_files/2025/08/11/dogs-1-2025-08-11-13-37-48.jpg)
ಬೆಂಗಳೂರು: ರಾಜ್ಯದಲ್ಲಿ ಈ ವರ್ಷ 2,86,649 ಜನರಿಗೆ ನಾಯಿ ಕಚ್ಚಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಕಿ ಅಂಶ ಬಿಡುಗಡೆ ಮಾಡಿದೆ.
ಇದನ್ನೂ ಓದಿ:ಚಾಮರಾಜನಗರ: ಕಾವೇರಿ ವನ್ಯಜೀವಿಧಾಮದಲ್ಲಿ ಮತ್ತೆ ಎರಡು ಹುಲಿ ಮರಿಗಳು ದುರಂತ ಅಂತ್ಯ
ಹೌದು, ಇತ್ತೀಚೆಗೆ ನಗರದಲ್ಲಿ ಬೀದಿ ನಾಯಿಗಳ ದಾಳಿ ಹೆಚ್ಚಾಗಿದೆ. ಕಂಡ ಕಂಡಲ್ಲಿ, ಸಿಕ್ಕ ಸಿಕ್ಕವರ ಮೇಲೆ ನಾಯಿಗಳು ಅಟ್ಯಾಕ್​ ಮಾಡುತ್ತಿವೆ. ನಾಯಿ ದಾಳಿಗೆ ಒಳಗಾದವರು ರೇಬಿಸ್​ಗೆ ಬಲಿ ಆಗುತ್ತಿದ್ದಾರೆ. ಹೀಗಾಗಿ ಬೀದಿ ನಾಯಿಗಳನ್ನು ಹಿಡಿದು ಅವುಗಳ ಆಶ್ರಯ ಕೇಂದ್ರಕ್ಕೆ ಸೇರಿಸಬೇಕು ಎಂದು ಸುಪ್ರೀಂ ಕೋರ್ಟ್​ ಆದೇಶ ಹೊರಡಿಸಿತ್ತು.
/filters:format(webp)/newsfirstlive-kannada/media/post_attachments/wp-content/uploads/2023/11/BNG_3_DOGS.jpg)
ಈ ಬೆನ್ನಲ್ಲೇ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಕಿ ಅಂಶ ಭಯ ಹುಟ್ಟಿಸುವಂತಿದೆ. ರಾಜ್ಯದಲ್ಲಿ ಈ ವರ್ಷ 2,86,649 ಜನರಿಗೆ ನಾಯಿ ಕಚ್ಚಿದೆ ಎಂದು ಅಂಕಿ ಅಂಶ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಜನವರಿ 1ರಿಂದ ಆಗಸ್ಟ್ 10ರ ತನಕ ರಾಜ್ಯದಲ್ಲಿ ನಾಯಿ ದಾಳಿಗೆ 26 ಮಂದಿ ಬಲಿಯಾಗಿದ್ದಾರೆ. ಕಳೆದೊಂದು ವಾರದಲ್ಲಿ 5,562 ಜನರಿಗೆ ನಾಯಿಗಳು ಕಚ್ಚಿವೆ ಎಂದು ಅಂಕಿ ಅಂಶದಲ್ಲಿ ತಿಳಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us