/newsfirstlive-kannada/media/media_files/2025/08/10/kalaburagi-accident-1-2025-08-10-22-04-05.jpg)
ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ತಂದೆ, ಮಗ ಸ್ಥಳದಲ್ಲೇ ಜೀವ ಕಳೆದುಕೊಂಡಿದ್ದಾರೆ. ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬೂರ (ಕೆ) ಗ್ರಾಮದ ಬಳಿ ಅಪಘಾತ ನಡೆದಿದೆ.
ತಂದೆ ಸೋಮಶೇಖರ (55), ಮಗ ಪ್ರಕಾಶ (28) ಮೃತ ದುರ್ದೈವಿಗಳು. ಕಾರು ಮತ್ತು ಸಾರಿಗೆ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ. ಮೃತರು ಬಾಗಲಕೋಟೆ ಜಿಲ್ಲೆಯ ಬೀಳಗಿ ಮೂಲದವರು ಎಂದು ತಿಳಿದುಬಂದಿದೆ.
ಕಾರಿನಲ್ಲಿ ಕಲಬುರಗಿಯಿಂದ ಬೀಳಗಿ ಕಡೆಗೆ ತೆರಳುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಸಾರಿಗೆ ಬಸ್ ನಡುವೆ ಡಿಕ್ಕಿ ಆಗಿದದೆ. ಘಟನೆಯಲ್ಲಿ ಮೃತ ಸೋಮಶೇಖರನ ಪತ್ನಿಗೂ ಗಾಯವಾಗಿದ್ದು, ಕಲಬುರಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ದೇವಲ ಗಾಣಗಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಿದ ಕರ್ನಾಟಕ ಚುನಾವಣಾ ಆಯೋಗ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us