/newsfirstlive-kannada/media/media_files/2025/12/18/eshwar-khandre-2025-12-18-09-46-10.jpg)
ದಾವಣಗೆರೆ: ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಸಚಿವ ಈಶ್ವರ ಖಂಡ್ರೆಯನ್ನ (Eshwara Khandre) ಆಯ್ಕೆ ಮಾಡಲಾಗಿದೆ. ಶಾಮನೂರು ಶಿವಶಂಕರಪ್ಪ ನಿಧನದಿಂದ ಅಧ್ಯಕ್ಷ ಸ್ಥಾನ ತೆರವಾಗಿತ್ತು.
ಮಹಾಸಭಾದಲ್ಲಿ ಈಶ್ವರ ಖಂಡ್ರೆ ಅವರು ಉಪಾಧ್ಯಕ್ಷರಾಗಿದ್ದರು. ಖಂಡ್ರೆ ಆಯ್ಕೆ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿರುವ ಬೆನ್ನಲ್ಲೆ ಅವರೇ ಮುಂದಿನ 4 ವರ್ಷಗಳ ಅವಧಿಗೆ ಮಹಾಸಭಾದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ಮಹಾಸಭಾದಲ್ಲಿ ಯಾರದ್ರೂ ಅಧ್ಯಕ್ಷರಾಗಿದ್ದು, ಮೃತಪಟ್ಟರೆ ಅವರ ಸ್ಥಾನಕ್ಕೆ ಹಿರಿಯ ಉಪಾಧ್ಯಕ್ಷರು ಆಯ್ಕೆ ಆಗ್ತಾರೆ. ಈಶ್ವರ ಖಂಡ್ರೆ ಹಿರಿಯ ಉಪಾಧ್ಯಕ್ಷರಾಗಿದ್ದು ಅವರೇ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ 94ನೇ ವಯಸ್ಸಿನಲ್ಲಿ ಡಿಸೆಂಬರ್ 14 ರಂದು ವಿಧಿವಶರಾಗಿದ್ದಾರೆ. ಇದೀಗ ಅವರಿಂದ ತೆರವಾದ ಸ್ಥಾನಕ್ಕೆ ಈಶ್ವರ್ ಖಂಡ್ರೆಯನ್ನ ಆಯ್ಕೆ ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us