/newsfirstlive-kannada/media/media_files/2025/11/05/farmer-protest-3-2025-11-05-14-02-10.jpg)
ಕಬ್ಬಿಗೆ ಪ್ರತಿ ಟನ್‌ಗೆ 3,500 ರೂಪಾಯಿ ಬೆಂಬಲ ಬೆಲೆ ನೀಡಬೇಕೆಂದು ಆಗ್ರಹಿಸಿ ಬೆಳಗಾವಿ, ಬಾಗಲಕೋಟೆ, ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೈತರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.
ವಿಜಯಪುರದಲ್ಲಿ ನಡೆದ ಧರಣಿಯಲ್ಲಿ ರೈತರ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಮಾತುಕತೆ ನಡೆಸಿದ್ದಾರೆ. ಈ ವೇಳೆ ಕಬ್ಬು ಬೆಳೆಗಾರರಿಗೆ ರಾಜ್ಯದ ಕೈಗಾರಿಕೆ ಖಾತೆ ಸಚಿವ ಎಂ.ಬಿ.ಪಾಟೀಲ್ ಕೆಲವೊಂದು ಭರವಸೆಗಳನ್ನು ನೀಡಿದ್ದಾರೆ.
ನಮ್ಮ ಸರ್ಕಾರ ರೈತರ ಪರವಾಗಿದೆ. ರೈತರ ಪರವಾಗಿ ನಾನು, ಆರ್.ಬಿ. ತಿಮ್ಮಾಪುರ ಅವರು ಹಾಗೂ ಸತೀಶ್ ಜಾರಕಿಹೊಳಿ ಸಿಎಂ ಜೊತೆ ಮಾತನಾಡುತ್ತೇವೆ. ಸಕ್ಕರೆ ಸಚಿವರು ನಮ್ಮ ಜಿಲ್ಲೆಯವರಿದ್ದಾರೆ. ಅವರು ಕೂಡಾ ಮಾತನಾಡುತ್ತಾರೆ. ಸಿದ್ದರಾಮಯ್ಯ ಸರ್ಕಾರ ರೈತರ ಪರವಾಗಿದೆ . ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿ ಇಲ್ಲಿಗೆ ಬಂದಿದ್ದೇನೆ. ಸಿಎಂ ಅಧ್ಯಕ್ಷತೆಯಲ್ಲಿ, ಸಕ್ಕರೆ ಸಚಿವರ ಜೊತೆಯಲ್ಲಿ ಸಭೆ ನಡೆಯಲಿದೆ. ನಾವೆಲ್ಲರೂ ಸೇರಿ ರೈತರ ಭಾವನೆಗಳನ್ನ ಗೌರವಿಸುವ ಕೆಲಸ ಮಾಡುತ್ತೇವೆ. ಬೆಂಬಲ ಬೆಲೆ ವಿಚಾರದಲ್ಲಿ ಕೇಂದ್ರದ ಪಾತ್ರವು ಮಹತ್ವದಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
/filters:format(webp)/newsfirstlive-kannada/media/media_files/2025/08/05/poddar-plumbing-company-mb-patil-2025-08-05-09-59-30.jpg)
ಪ್ರತಿ ಟನ್ ಕಬ್ಬುಗೆ 3, 350 ರೂಪಾಯಿ ಬೆಲೆಯನ್ನು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಆದರೆ ಸಕ್ಕರೆ ಕಾರ್ಖಾನೆ ಬೇರೆ ರೀತಿಯಲ್ಲಿವೆ. ಕೆಲವು ಖಾಸಗಿ ಇವೆ. ಕೆಲವು ಸಹಕಾರಿ ಇವೆ. ದರ ವಿಚಾರದಲ್ಲಿ ಕೆಲವೊಬ್ಬರಿಗೆ ಅಧಿಕಾರ ಇದೆ. ಕೆಲವು ಸಕ್ಕರೆ ಕಾರ್ಖಾನೆಗಳಿಗೆ ಇಲ್ಲ. ಹೀಗಾಗಿ ಪ್ರಧಾನಿ ಬಳಿ ನಿಯೋಗ ಹೋಗಿ ಮಾತನಾಡಬೇಕಿದೆ. ಕಳೆದ 9 ವರ್ಷದಿಂದ ಎಫ್ ಆರ್ ಪಿ ಬದಲಾವಣೆ ಮಾಡಿಲ್ಲ. ರಾಜ್ಯದ ಜೊತೆಗೆ ಕೇಂದ್ರದ ಪಾತ್ರವೂ ಇದೆ. ಎರಡು ಸರ್ಕಾರ ಸೇರಿ ಕೆಲಸ ಮಾಡಬೇಕಿದೆ. ನಾವು ಯಾರ ವಿರುದ್ಧವೂ ಆರೋಪ ಮಾಡುತ್ತಿಲ್ಲ. ಆದರೆ ಎರಡು ಸರ್ಕಾರದ ಜವಾಬ್ದಾರಿ ಅಷ್ಟೇ ಇದೆ. ವಿಜಯೇಂದ್ರ ಕೂಡ ಇದರ ಬಗ್ಗೆ ಗಮನ ಹರಿಸಬೇಕು ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದರು.
ರಾಜ್ಯ ಸರ್ಕಾರದಿಂದ ಏನೆಲ್ಲಾ ಮಾಡಬೇಕೋ ಅದನ್ನ ಮಾಡುತ್ತೇವೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಭರವಸೆ ನೀಡಿದ್ದರು.
ಸಿಎಂ ಸಿದ್ದರಾಮಯ್ಯ ಕೂಡಾ ಪ್ರಧಾನಿ ಹಾಗೂ ಸಂಬಂಧಪಟ್ಟ ಸಚಿವರನ್ನ ಭೇಟಿ ಮಾಡುತ್ತಾರೆ. ನಾಳೆ ಕ್ಯಾಬಿನೆಟ್ ನಲ್ಲಿ ಈ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ್ ಭರವಸೆ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us