ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. ಪ್ರಾಣಬಿಟ್ಟ ಮೂವರು ಮಹಿಳಾ ಕಾರ್ಮಿಕರು

ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಗ್ರಾಮದ ಬಳಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಕೃಷಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ರೂಸರ್ ಮತ್ತು ಕ್ಯಾಂಟರ್ ನಡುವೆ ನಡೆದ ಮುಖಾಮುಖಿ ಡಿಕ್ಕಿ ಈ ದುರಂತಕ್ಕೆ ಕಾರಣವಾಗಿದೆ.

author-image
Ganesh Kerekuli
gadaga accident
Advertisment

ಗದಗ: ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಗ್ರಾಮದ ಬಳಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಕೃಷಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ರೂಸರ್ ಮತ್ತು ಕ್ಯಾಂಟರ್ ನಡುವೆ ನಡೆದ ಮುಖಾಮುಖಿ ಡಿಕ್ಕಿ ಈ ದುರಂತಕ್ಕೆ ಕಾರಣವಾಗಿದೆ.

ಮೃತರ ವಿವರ

ಅಪಘಾತದಲ್ಲಿ ಮೃತಪಟ್ಟವರನ್ನು ಮರಿಯಂಬು ಹುನಗುಂದ (55), ಅನ್ನಪೂರ್ಣ ಚಂಗಳಿ (45) ಹಾಗೂ ಸುಜಾತಾ ಹೊಸಮನಿ (30) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಗಜೇಂದ್ರಗಡ ಮೂಲದವರೆಂದು ತಿಳಿದುಬಂದಿದೆ.

ಇಂದು ಬೆಳಗ್ಗೆ ಗಜೇಂದ್ರಗಡದಿಂದ ರೋಣ ಕಡೆಗೆ ಕೃಷಿ ಕಾರ್ಮಿಕರನ್ನು ಹೊತ್ತ ಕ್ರೂಸರ್ ವಾಹನವೊಂದು ತೆರಳುತ್ತಿತ್ತು. ಇವರೆಲ್ಲರೂ ಹೊಲಗಳಲ್ಲಿ ಕಡಲೆ ಕೀಳುವ ಕೆಲಸಕ್ಕಾಗಿ ಹೋಗುತ್ತಿದ್ದರು. ಈ ವೇಳೆ ರೋಣದಿಂದ ಗಜೇಂದ್ರಗಡ ಕಡೆಗೆ ವೇಗವಾಗಿ ಬರುತ್ತಿದ್ದ ಕ್ಯಾಂಟರ್ ವಾಹನವು ಜಿಗಳೂರು ಬಳಿ ಕ್ರೂಸರ್‌ಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕ್ರೂಸರ್ ವಾಹನ ಸಂಪೂರ್ಣವಾಗಿ ಜಖಂಗೊಂಡಿದ್ದು, ಅದರಲ್ಲಿದ್ದ ಮೂವರು ಮಹಿಳೆಯರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ವಾಹನದಲ್ಲಿದ್ದ ಇತರ ಕಾರ್ಮಿಕರಿಗೂ ಗಾಯಗಳಾಗಿದ್ದು, ಕೂಡಲೇ ಅವರನ್ನು ಚಿಕಿತ್ಸೆಗಾಗಿ ಗದಗ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ರೋಣ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಟ್ಟೆ ಬೆವರು ಸುರಿಸಿ ಜೀವನ ಸಾಗಿಸಲು ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಸಾವು ಜಿಲ್ಲೆಯಲ್ಲಿ ಶೋಕದ ಛಾಯೆ ಮೂಡಿಸಿದೆ.

ಇದನ್ನೂ ಓದಿ: ಕಂಡೀಷನ್​​ಗೆ ಹುಡುಗರು ಒಪ್ತಿಲ್ಲ, ಮದುವೆ ವಿಳಂಬ! ಹುಸೇನ್ ಸಾಗರ್‌ಗೆ ಹಾರಿ ಜೀವಬಿಟ್ಟ ಟೆಕ್ಕಿ..

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Gadag news
Advertisment