ಮನೆ ಕಟ್ಟಲು ಅಗೆಯುತ್ತಿದ್ದಾಗ ಸಿಕ್ಕೇ ಬಿಡ್ತು ನಿಧಿ.. ಪ್ರಾಮಾಣಿಕತೆ ಮೆರೆದರೂ ಕುಟುಂಬಕ್ಕೆ ಎದುರಾಯ್ತು ಗಂಡಾಂತರ..!

ದೇವಾಲಯಗಳ ಸ್ವರ್ಗ, ಶಿಲ್ಪ ಕಲೆಯ ತೊಟ್ಟಿಲು ಅಂತಲೇ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮವನ್ನ ಕರೆಯುತ್ತಾರೆ. ಅಂತಹ ವಾಸ್ತು ಶಿಲ್ಪ ಕಲೆಗಳನ್ನು ಹೊಂದಿರುವ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿದೆ. ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ 470 ಗ್ರಾಂ ತೂಕದ ಚಿನ್ನಾಭರಣ ಸಿಕ್ಕಿದೆ.

author-image
Ganesh Kerekuli
gdg 2

ನಿಧಿ ಪತ್ತೆ

Advertisment

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮವನ್ನ ದೇವಾಲಯಗಳ ಸ್ವರ್ಗ, ಶಿಲ್ಪ ಕಲೆಯ ತೊಟ್ಟಿಲು, ವಾಸ್ತು ಶಿಲ್ಪ ಕಲೆಗಳ ಸ್ವರ್ಗ ಅಂತ ಕೆರೆಯಲಾಗುತ್ತದೆ. ಇಂತಹ ಐತಿಹಾಸಿಕ ಸ್ಥಳದಲ್ಲಿ ಹೊನ್ನಿನ ನಿಧಿ ಪತ್ತೆಯಾಗಿದೆ. ಮನೆ ಕಟ್ಟಲು ಭೂಮಿ ಅಗೆಯುವಾಗ ತಾಮ್ರದ ಪಾತ್ರೆಯಲ್ಲಿ ಚಿನ್ನಾಭರಣ ಪತ್ತೆಯಾಗಿದೆ. ಲಕ್ಕುಂಡಿ ಗ್ರಾಮದ ನಿವಾಸಿ ಗಂಗವ್ವ ಬಸವರಾಜ ರಿತ್ತಿ ಮನೆ ಕಟ್ಟಲು ಅಡಿಪಾಯ ಹಾಕಿಸುತ್ತಿದ್ದರು. ಈ ವೇಳೆ 470 ಗ್ರಾಂ ತೂಕದ ಚಿನ್ನಾಭರಣಗಳು ಸಿಕ್ಕಿದೆ.

gdg 1

ತಾಮ್ರದ ಪಾತ್ರೆಯಲ್ಲಿ ನಿಧಿ ಪತ್ತೆ!

ಗಂಗವ್ವ ಬಸವರಾಜ ರಿತ್ತಿ ಅನ್ನೋರು ಮನೆ ಕಟ್ಟಲು ಅಡಿಪಾಯ ಹಾಕಿಸುತ್ತಿದ್ದರು. ಈ ವೇಳೆ ಎಂಟನೇ ತರಗತಿಯ ವಿದ್ಯಾರ್ಥಿ ಪ್ರಜ್ವಲ್ ರಿತ್ವಿಕ್​ಗೆ  ತಾಮ್ರದ ಪಾತ್ರೆ ಕಾಣಿಸಿದೆ. ಅದರಲ್ಲಿ ರಾಜರ ಕಾಲದ ಹಾರ ಮತ್ತು ಕಿವಿಯೋಲೆಗಳು ಸೇರಿದಂತೆ ವಿವಿಧ ರೀತಿಯ ಆಭರಣಗಳು ಪತ್ತೆಯಾಗಿದೆ.

ಸುಮಾರು 470 ಗ್ರಾಂ ಚಿನ್ನಾಭರಣ ಪತ್ತೆಯಾಗಿದೆ. ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್​​ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ ಭೇಟಿ ನೀಡಿ ನಿಧಿಯನ್ನ ವಶಕ್ಕೆ ಪಡೆದಿದ್ದಾರೆ. ಇನ್ನು, ತಾಮ್ರದ ಪಾತ್ರೆಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಅನ್ನೋದನ್ನ ಪರಿಶೀಲನೆ ನಡೆಸಲಾಗ್ತಿದೆ. 

ಜಾಕ್​ಪಾಟ್ ಅಂದ್ಕೊಂಡಿದ್ದ ಕುಟುಂಬಕ್ಕೆ ಆತಂಕ

ಪ್ರಾಮಾಣಿಕತೆ ಮೆರೆದ ಕುಟುಂಬ ನಿಧಿಯನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರೂ, ಈಗ ಆ ಕುಟುಂಬಕ್ಕೆ ಭಯ ಮತ್ತು ಆತಂಕ ಶುರುವಾಗಿದೆ. ನಿಧಿ ಸಿಕ್ಕಿದ ಸ್ಥಳವನ್ನು ನಿಷಿದ್ಧ ಪ್ರದೇಶವೆಂದು ಘೋಷಿಸಿರುವ ಕಾರಣ, ಅವರು ಕಟ್ಟುತ್ತಿದ್ದ ಮನೆ ಅರ್ಧಕ್ಕೆ ನಿಂತಿದೆ. ಹೀಗಾಗಿ, ವಾಸಕ್ಕೆ ಮನೆಯಿಲ್ಲದೆ ಕುಟುಂಬ ಬೀದಿಗೆ ಬಂದಂತಾಗಿದ್ದು, ಎಲ್ಲಿ ಬದುಕು ಸಾಗಿಸಬೇಕು ಎಂಬ ಚಿಂತೆಯಲ್ಲಿದೆ. ಮನೆಯ ಯಜಮಾನ ಮೃತಪಟ್ಟಿದ್ದು, ಕುಟುಂಬದಲ್ಲಿ ತಾಯಿ ಮತ್ತು ಚಿಕ್ಕ ಮಗನಿದ್ದಾನೆ. ಈ ಬಡ ಕುಟುಂಬಕ್ಕೆ ಈಗ ಆಸರೆ ಇಲ್ಲದೇ ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆಯ ಸದಸ್ಯರು ಮತ್ತು ಗ್ರಾಮಸ್ಥರು ಒಗ್ಗಟ್ಟಾಗಿ ನಿಂತು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ದೈವದ ಮೊರೆ ಹೋದ ಸಿಂಪಲ್​ ಸ್ಟಾರ್​ .. ಹೊಸ ಸಿನಿಮಾ ಮಾಡ್ತಾರಂತೆ ಶೆಟ್ರು!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Gadag news Lakkundi treasure found
Advertisment