/newsfirstlive-kannada/media/media_files/2025/09/01/mnd_ganesh-2025-09-01-10-01-43.jpg)
ಮಂಡ್ಯ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಡಿಜೆಗೆ ಭರ್ಜರಿ ಸ್ಟೆಪ್ಸ್ ಹಾಕುತ್ತಿದ್ದ ವ್ಯಕ್ತಿ ಒಬ್ಬರು ಹೃದಯಾಘಾತದಿಂದ ಉಸಿರು ಚೆಲ್ಲಿದ್ದಾರೆ. ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಜೊತ್ತನಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಗ್ರಾಮದ ನಿವಾಸಿ ಮಂಜುನಾಥ್ (55) ಹೃದಯಾಘಾತದಿಂದ ಕೊನೆಯುಸಿರೆಳೆದವರು. ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಮಂಜುನಾಥ್ ಭರ್ಜರಿ ಡ್ಯಾನ್ಸ್ ಮಾಡುತ್ತಿದ್ದರು. ಮೆರವಣಿಗೆಯಲ್ಲಿ ಯುವಕರರೊಂದಿಗೆ ಡಿಜೆ ಹಾಡುಗಳಿಗೆ ಮಂಜುನಾಥ್ ಕುಣಿದುಕೊಂಡು ಬರುತ್ತಿದ್ದರು. ಆದರೆ ಡ್ಯಾನ್ಸ್ ಮಾಡುತ್ತಿದ್ದಾಗಲೇ ಹಠಾತ್ ಹೃದಯಾಘಾತ ಸಂಭವಿಸಿದೆ.
ಇದನ್ನೂ ಓದಿ: ಅಗ್ನಿ IPS, ಪೊಲೀಸ್ ಸ್ಟೋರಿಯಂತಹ ಸಿನಿಮಾ ರೈಟರ್ ಎಸ್.ಎಸ್ ಡೇವಿಡ್ ನಿಧನ
ಕುಸಿದು ಬಿದ್ದ ಮಂಜುನಾಥ್ ನೋಡ ನೋಡುತ್ತಿದ್ದಂತೆ ಹೃದಯಾಘಾತದಿಂದ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಸದ್ಯ ಅವರ ಕೊನೆ ಘಳಿಗೆಯ ದೃಶ್ಯಗಳನ್ನು ಸ್ಥಳೀಯರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಕೆ.ಆರ್ ಪೇಟೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸದ್ಯ ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ