/newsfirstlive-kannada/media/post_attachments/wp-content/uploads/2025/01/JOBS_aspirant.jpg)
ಬೆಂಗಳೂರು: ರಾಜ್ಯದ ಎಲ್ಲ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರ ಶುಭ ಸುದ್ದಿ ನೀಡಿದೆ. ರಾಜ್ಯ ಸರ್ಕಾರದ ಎಲ್ಲಾ ನೇಮಕಾತಿಗಳಲ್ಲಿ ಎಲ್ಲ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಒಂದು ಬಾರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ಆಗುವವರೆಗೂ ರಾಜ್ಯದ ಸಿವಿಲ್​ ಸೇವೆಗಳಲ್ಲಿ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿರಲಿಲ್ಲ. ಬ್ಯಾಕ್​ ಲಾಗ್​ ಹುದ್ದೆಗಳನ್ನು ಕೂಡ ಭರ್ತಿ ಮಾಡಿರಲಿಲ್ಲ. ಏಕೆಂದರೆ, ಹೊಸದಾಗಿ ಯಾವುದೇ ಅಧಿಸೂಚನೆಯನ್ನು 2024ರ ಅಕ್ಟೋಬರ್​ 28 ರಿಂದ ಮುಂದಿನ ಆದೇಶದವರೆಗೂ ಹೊರಡಿಸಬಾರದು ಎಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿತ್ತು. ಹೀಗಾಗಿ ಒಂದು ವರ್ಷದಿಂದ ಸರ್ಕಾರದ ಯಾವುದೇ ನೇಮಕಾತಿ ಆಗಿರಲಿಲ್ಲ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್ ನೀಡಿದ್ದು ಎಲ್ಲ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಒಂದು ಬಾರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿದೆ. ಹೀಗಾಗಿ ಎಲ್ಲ ಅಭ್ಯರ್ಥಿಗಳು ಸರ್ಕಾರದ ಉದ್ಯೋಗಗಳಿಗೆ ಅರ್ಜಿಗಳನ್ನು ಅಲ್ಲಿಕೆ ಮಾಡಬಹುದು.
ಧಾರವಾಡದಲ್ಲಿ ವಿದ್ಯಾರ್ಥಿಗಳು ಕಳೆದ ವಾರ ಬೃಹತ್ ಪ್ರತಿಭಟನೆ ಮಾಡಿ ವಯೋಮಿತಿ ಸಡಿಲಿಕೆ ಮಾಡುವಂತೆ ಆಕ್ರೋಶ ವ್ಯಕ್ತಪಡಿಸಿದ್ದರು. ಸರ್ಕಾರ ಹಲವು ವರ್ಷಗಳಿಂದ ನೇಮಕ ಮಾಡದ ಕಾರಣ ಅಭ್ಯರ್ಥಿಗಳ ವಯಸ್ಸು ಹೆಚ್ಚಾಗಿರುತ್ತದೆ. ವಯಸ್ಸು ಹೆಚ್ಚಾದರೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನ ಬರೆಯಲು ಸಾಧ್ಯವಿಲ್ಲ. ಇದನ್ನು ಮನಗಂಡಿರುವ ಸರ್ಕಾರ ಉದ್ಯೋಗ ಸಂಬಂಧ ನಡೆಸುವ ಎಲ್ಲಾ ಪರೀಕ್ಷೆಗಳಲ್ಲಿ ವಯೋಮಿತಿ ಸಡಿಲಿಕೆ ಮಾಡಿ ಆದೇಶ ಹೊರಡಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ