/newsfirstlive-kannada/media/media_files/2025/10/15/ips-officer-alok-kumar-2025-10-15-12-16-07.jpg)
ಹಿರಿಯ IPS ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಬಡ್ತಿ ನೀಡಿದೆ. ಎಡಿಜಿಪಿ ಹುದ್ದೆಯಿಂದ ಡಿಜಿಪಿ ಹುದ್ದೆಗೆ ರಾಜ್ಯ ಸರ್ಕಾರ ಬಡ್ತಿ ನೀಡಿದೆ. ಅಲೋಕ್ ಕುಮಾರ್ ಅವರಿಗೆ ಬಡ್ತಿ ನೀಡಿ ಕಾರಾಗೃಹ ಇಲಾಖೆಯ ಡಿಜಿಪಿಯಾಗಿ ವರ್ಗಾವಣೆ ಮಾಡಿದೆ. ಕಾರಾಗೃಹ ಇಲಾಖೆಯ ಎಡಿಜಿಪಿಯಾಗಿದ್ದ ಬಿ.ದಯಾನಂದ್ ಅವರನ್ನು ಪೊಲೀಸ್ ತರಬೇತಿ ಶಾಲೆಯ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ತಮಗೆ ಪೊಲೀಸ್ ಇಲಾಖೆಯಲ್ಲಿ ಬಡ್ತಿ ನೀಡುತ್ತಿಲ್ಲ ಎಂದು ದೂರಿ ಅಲೋಕ್ ಕುಮಾರ್ ಅವರು ಕೆಎಟಿ ಗೆ ಅರ್ಜಿ ಸಲ್ಲಿಸಿದ್ದರು. ತಮ್ಮನ್ನು ಕಡೆಗಣಿಸಿ ಅರುಣ್ ಚಕ್ರವರ್ತಿ ಮತ್ತು ಉಮೇಶ್ ಕುಮಾರ್ ಅವರಿಗೆ ಬಡ್ತಿ ನೀಡಲಾಗಿದೆ ಎಂದು ಅಲೋಕ್ ಕುಮಾರ್ ಕೆಎಟಿಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಮನವಿ ಮಾಡಿದ್ದರು. ಕೊನೆಗೆ ಈಗ ರಾಜ್ಯ ಸರ್ಕಾರ ಅಲೋಕ್ ಕುಮಾರ್ ಅವರಿಗೆ ಬಡ್ತಿ ನೀಡಿ ಕಾರಾಗೃಹ ಇಲಾಖೆಯ ಡಿಜಿಪಿ ಆಗಿ ನೇಮಿಸಿದೆ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us