/newsfirstlive-kannada/media/media_files/2025/09/17/cm-siddaramaiah-1-2025-09-17-18-10-03.jpg)
ಬೆಂಗಳೂರು: ಮೊಸರು, ತುಪ್ಪ ಸೇರಿದಂತೆ ನಂದಿನಿ ಉತ್ಪನ್ನಗಳ ಬೆಲೆ ಇಳಿಕೆ ಸಾಧ್ಯತೆ ಇದೆ ಎನ್ನಲಾಗ್ತಿದೆ. ದರ ಇಳಿಕೆ ಸಂಬಂಧ ಕೆಎಂಎಫ್‌ನ ಹಿರಿಯ ಅಧಿಕಾರಿಗಳ ಜೊತೆ ಇಂದು ಮಹತ್ವದ ಸಭೆ ನಡೆಯಲಿದೆ. ಸೆಪ್ಟೆಂಬರ್ 22 ರಿಂದಲೇ ನಂದಿನಿ ಉತ್ಪನ್ನಗಳ ದರ ಕಡಿಮೆಯಾಗುವ ಸಾಧ್ಯತೆ ಇದೆ.
ಗ್ರಾಹಕರಿಗೆ ಸಿಗುತ್ತಾ ಗುಡ್ನ್ಯೂಸ್?
ಕೇಂದ್ರ ಸರ್ಕಾರದಿಂದ GST ಇಳಿಕೆ ಬೆನ್ನಲ್ಲೇ ಕೆಎಂಎಫ್ ನಂದಿನಿ ಉತ್ಪನ್ನಗಳ ಬೆಲೆ ಇಳಿಕೆಗೆ ತೀರ್ಮಾನಿಸಿದೆ. ಆಹಾರ ಉತ್ಪನ್ನಗಳ ಮೇಲಿನ GSTಯನ್ನ ಶೇಕಡಾ 12 ರಿಂದ 5ಕ್ಕೆ ಇಳಿಕೆ ಹಿನ್ನೆಲೆ ನಂದಿನಿ ಉತ್ಪನ್ನಗಳ ಬೆಲೆ ಇಳಿಕೆ ಸಾಧ್ಯತೆ ಇದೆ. ದರ ಇಳಿಕೆ ಸಂಬಂಧ ಕೆಎಂಎಫ್‌ನ ಹಿರಿಯ ಅಧಿಕಾರಿಗಳ ಜೊತೆ ಇಂದು ಮಹತ್ವದ ಸಭೆ ನಡೆಸಲಿದ್ದಾರೆ.
/filters:format(webp)/newsfirstlive-kannada/media/media_files/2025/09/19/nandini-product-2025-09-19-11-43-33.jpg)
ಈ ಸಭೆಯಲ್ಲಿ ಮೊಸರು, ತುಪ್ಪ, ಬೆಣ್ಣೆ, ಲಸ್ಸಿ ಸೇರಿದಂತೆ ‘ನಂದಿನಿ’ಯ ವಿವಿಧ ಉತ್ಪನ್ನಗಳ ದರ ಇಳಿಕೆಯಾಗಲಿದೆ. ಮೊಸರಿನ ದರ ಲೀಟರ್‌ಗೆ 4 ರೂಪಾಯಿವರೆಗೆ ಕಡಿಮೆ ಆಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ.
2017ರಲ್ಲಿ ಹಾಲಿನ ಉತ್ಪನ್ನಗಳ ಮೇಲೆ ಜಿಎಸ್‌ಟಿ ಜಾರಿಗೊಳಿಸಲಾಗಿತ್ತು. ಬಳಿಕ 2022ರಲ್ಲಿ ಜಿಎಸ್‌ಟಿಯನ್ನು ಶೇಕಡಾ 12ಕ್ಕೆ ಹೆಚ್ಚಿಸಲಾಗಿತ್ತು. ಈಗ ತೆರಿಗೆ ದರ ಕಡಿಮೆ ಮಾಡಿರುವುದರಿಂದ ಗ್ರಾಹಕರಿಗೆ ಸ್ವಲ್ಪಮಟ್ಟಿಗೆ ಹೊರೆ ಕಡಿಮೆಯಾಗಲಿದೆ. ಸೆಪ್ಟೆಂಬರ್ 22ರಿಂದಲೇ ನಂದಿನಿ ಉತ್ಪನ್ನಗಳ ದರ ಕಡಿಮೆಯಾಗಲಿದೆ ಎಂದು ಕೆಎಂಎಫ್, ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ನ್ಯೂಸ್ಫಸ್ಟ್ ಗೆ ಮಾಹಿತಿ ನೀಡಿದ್ದಾರೆ.
ಇದನ್ನು ಓದಿ:ಭೀಕರ ಅಪಘಾತ.. ದುರಂತ ಅಂತ್ಯ ಕಂಡ ಮೂವರು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ