/newsfirstlive-kannada/media/media_files/2025/12/03/bike-taxi-2025-12-03-11-34-05.jpg)
ಬೆಂಗಳೂರು: ಬೈಕ್ ಟ್ಯಾಕ್ಸಿ ವಿಚಾರದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ರಾಜ್ಯದಲ್ಲಿ ಬೈಕ್‌ಗಳನ್ನು ಟ್ಯಾಕ್ಸಿಗಳನ್ನಾಗಿ ಬಳಸಲು ಹೈಕೋರ್ಟ್ ಅನುಮತಿ ನೀಡಿದ್ದು, ಆ ಮೂಲಕ ಈ ಹಿಂದೆ ರಾಜ್ಯ ಸರ್ಕಾರ ವಿಧಿಸಿದ್ದ ನಿಷೇಧಕ್ಕೆ ತಡೆ ನೀಡಿದಂತಾಗಿದೆ.
ಸಿಂಗಲ್ ಬೆಂಚ್ ಆದೇಶ ರದ್ದುಗೊಳಿಸಿದ ವಿಭಾಗೀಯ ಪೀಠ
ಈ ಹಿಂದೆ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಹೈಕೋರ್ಟ್ ಈಗ ರದ್ದುಗೊಳಿಸಿದೆ. ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠವು ಮಹತ್ವದ ತೀರ್ಪು ನೀಡಿದೆ. ಬೈಕ್ ಟ್ಯಾಕ್ಸಿ ಸೇವೆ ನೀಡುವ ಓಲಾ (Ola) ಮತ್ತು ಊಬರ್ (Uber) ಕಂಪನಿಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗೆ ಹಸಿರು ನಿಶಾನೆ ತೋರಿಸಿದೆ.
ಏನಿದು ಪ್ರಕರಣ?
ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಂದ ಸಂಚಾರ ನಿಯಮ ಉಲ್ಲಂಘನೆಯಾಗುತ್ತಿದೆ ಮತ್ತು ಆಟೋ ರಿಕ್ಷಾ ಚಾಲಕರ ಹಿತಾಸಕ್ತಿಗೆ ಧಕ್ಕೆಯಾಗುತ್ತಿದೆ ಎಂದು ರಾಜ್ಯ ಸರ್ಕಾರವು ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಖಾಸಗಿ ಕಂಪನಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದವು. ಆರಂಭದಲ್ಲಿ ಏಕಸದಸ್ಯ ಪೀಠವು ಸರ್ಕಾರದ ಪರವಾಗಿ ತೀರ್ಪು ನೀಡಿತ್ತು. ಈಗ ವಿಭಾಗೀಯ ಪೀಠವು ಈ ಆದೇಶವನ್ನು ಬದಲಿಸಿದ್ದು, ಬೈಕ್ ಟ್ಯಾಕ್ಸಿಗಳಿಗೆ ಅವಕಾಶ ಕಲ್ಪಿಸಿದೆ.
ಇದನ್ನೂ ಓದಿ: ಧರ್ಮಸ್ಥಳದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಉಗ್ರಂ ಮಂಜು
/filters:format(webp)/newsfirstlive-kannada/media/media_files/2025/08/04/ramalingareddy-2025-08-04-19-09-18.jpg)
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ:
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ‘ಇನ್ನೂ ಕೋರ್ಟ್ ಆದೇಶದ ಪ್ರತಿ ಸಿಕ್ಕಿಲ್ಲ. ಆದೇಶದ ಪ್ರತಿ ಬಂದ ನಂತರ ಅದನ್ನು ಕೂಲಂಕಷವಾಗಿ ಪರಿಶೀಲಿಸುತ್ತೇನೆ. ಈ ಬಗ್ಗೆ ಇಲಾಖೆಯ ಕಮಿಷನರ್ ಅವರೊಂದಿಗೆ ಚರ್ಚಿಸಿ, ಮುಂದಿನ ಕಾನೂನು ಹೋರಾಟ ಅಥವಾ ತೀರ್ಮಾನದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಗ್ರಾಹಕರಿಗೆ ವರದಾನ, ಚಾಲಕರಿಗೆ ಆತಂಕ
ಹೈಕೋರ್ಟ್‌ನ ಈ ನಿರ್ಧಾರದಿಂದ ಬೆಂಗಳೂರಿನಂತಹ ಟ್ರಾಫಿಕ್ ದಟ್ಟಣೆಯ ನಗರಗಳಲ್ಲಿ ಕಡಿಮೆ ದರದಲ್ಲಿ ವೇಗವಾಗಿ ಸಂಚರಿಸಲು ಬಯಸುವ ಜನರಿಗೆ ಅನುಕೂಲವಾಗಲಿದೆ. ಆದರೆ, ಈ ಮೊದಲಿನಿಂದಲೂ ಬೈಕ್ ಟ್ಯಾಕ್ಸಿಗಳನ್ನು ವಿರೋಧಿಸುತ್ತಿರುವ ಆಟೋ ರಿಕ್ಷಾ ಚಾಲಕರು ಈ ಬೆಳವಣಿಗೆಯಿಂದ ಮತ್ತಷ್ಟು ಆತಂಕಕ್ಕೆ ಒಳಗಾಗುವ ಸಾಧ್ಯತೆಯಿದೆ.
ಸದ್ಯಕ್ಕೆ ಹೈಕೋರ್ಟ್ ಆದೇಶದಿಂದ ರಾಜ್ಯದಲ್ಲಿ ಮತ್ತೆ ಬೈಕ್ ಟ್ಯಾಕ್ಸಿಗಳು ರಸ್ತೆಗಿಳಿಯುವುದು ಪಕ್ಕಾ ಆದಂತಿದೆ. ಸರ್ಕಾರ ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತದೆಯೇ ಅಥವಾ ಹೊಸ ನಿಯಮಾವಳಿ ರೂಪಿಸುತ್ತದೆಯೇ ಎಂಬುದು ಕಾದು ನೋಡಬೇಕಿದೆ.
ಇದನ್ನೂ ಓದಿ:ನಾನಿನ್ನೂ ಆ ಶಾಕ್​​ನಲ್ಲೇ ಇದ್ದೀನಿ -ಗಿಲ್ಲಿ ಹೇಳಿದ್ದು ಯಾವ ವಿಚಾರ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us