/newsfirstlive-kannada/media/media_files/2025/09/13/hsn_chandan_1-2025-09-13-15-33-09.jpg)
ಹಾಸನ: ತಾಲೂಕಿನ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಗಣಪತಿ ಮೆರವಣಿಗೆ ವೇಳೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ 25 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದೇ ಘಟನೆಯಲ್ಲಿ ಟ್ರಕ್ ಗುದ್ದಿದ ರಭಸಕ್ಕೆ ಚಂದನ್ ಎನ್ನುವ ಯುವಕನ ಬ್ರೈನ್ ಡೆಡ್ (ಮೆದುಳು ನಿಷ್ಕ್ರಿಯ) ಆಗಿದೆ.
ಹಾಸನ ತಾಲೂಕಿನ ಶಿವಯ್ಯನ ಕೊಪ್ಪಲು ಗ್ರಾಮದ ಯುವಕ ಚಂದನ್ (26) ಬ್ರೈನ್ ಡೆಡ್ನಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿನ್ನೆ ಮೊಸಳೆಹೊಸಹಳ್ಳಿ ಗ್ರಾಮದ ಗಣಪತಿ ಮೆರವಣಿಗೆಯಲ್ಲಿ ಯುವಕ ಪಾಲ್ಗೊಂಡಿದ್ದನು. ಈ ವೇಳೆ ಏಕಾಏಕಿ ನುಗ್ಗಿದ್ದ ಟ್ರಕ್ 9 ಜನರನ್ನು ಬಲಿ ಪಡೆದಿತ್ತು. ಇದರಲ್ಲಿ ಚಂದನ್ಗೂ ಟ್ರಕ್ ರಭಸವಾಗಿ ಡಿಕ್ಕಿ ಹೊಡೆದಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ: ಬೈಕ್ ಅಡ್ಡ ಬಂದಿದ್ದೇ ಹಾಸನ ದುರಂತಕ್ಕೆ ಕಾರಣ.. 9 ಬಲಿ, 25 ಜನ ಗಂಭೀರ
ಚಂದನ್ ಬ್ರೈನ್ ಡೆಡ್ ಆಗಿದೆ ಎಂದು ತಿಳಿಸಲಾಗಿದ್ದು ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯುನಲ್ಲಿರುವ ಚಂದನ್ನ ಸ್ಥಿತಿ ಗಂಭೀರವಾಗಿದೆ ಎಂದು ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ. ಯುವಕ ಚಿಂತಾಜನಕ ಆಗಿರುವ ಬಗ್ಗೆ ಹಿಮ್ಸ್ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ಈ ಭೀಕರ ಅಪಘಾತದಲ್ಲಿ ಮೃತಪಟ್ಟ 9 ಜನರ ಗುರುತು ಪತ್ತೆ ಹಚ್ಚಲಾಗಿದೆ. ಕೆಬಿ ಪಾಳ್ಯ, ಡನಾಯಕನಹಳ್ಳಿ ಕೊಪ್ಪಲು ಗ್ರಾಮದ ಈಶ್ವರ (17), ಮುತ್ತಿಗೆಹೀರಳ್ಳಿ ಗ್ರಾಮದ ಗೋಕುಲ (17), ಕಬ್ಬಿನಹಳ್ಳಿ ಗ್ರಾಮದ ಕುಮಾರ (25), ಪ್ರವೀಣ (25), ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಗವಿಗಂಗಾಪುರ ಗ್ರಾಮದ ಮಿಥುನ್ (23), ಚಿಕ್ಕಮಗಳೂರು ಮಣೆನಹಳ್ಳಿ ಮರ್ಲೆ ಗ್ರಾಮದ ಸುರೇಶ್ (ಬಿಇ ವಿದ್ಯಾರ್ಥಿ), ಹೊಳೆನರಸೀಪುರ ತಾಲೂಕಿನ ರಾಜೇಶ್ (17), ಹಾಸನ ತಾಲೂಕಿನ ಬಂಟರಹಳ್ಳಿ ಗ್ರಾಮದ ಪ್ರಭಾಕರ್ (55), ಬಳ್ಳಾರಿ ಮೂಲದ ಪ್ರವೀಣ್ ಕುಮಾರ್ (ಅಂತಿಮ ಬಿಇ ವಿದ್ಯಾರ್ಥಿ, ಚಿಕಿತ್ಸೆ ಫಲಕಾರಿಯಾಗದೇ ಬೆಳಗ್ಗೆ ನಿಧನರಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ