/newsfirstlive-kannada/media/media_files/2026/01/13/wild-elephant-attack-on-women-2026-01-13-16-46-02.jpg)
ಕಾಡಾನೆ ದಾಳಿಯಿಂದ ಮೃತಪಟ್ಟ ಶೋಭಾ ಎಂಬ ಮಹಿಳೆ
ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಜೀವ ಬಲಿಯಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಇಂದು ಬೆಳಿಗ್ಗೆ ಕೂಲಿ ಕೆಲಸಕ್ಕೆಂದು ಹೋಗಿದ್ದ ಶೋಭಾ (40) ಎಂಬ ಮಹಿಳೆ ಕಾಡಾನೆ ದಾಳಿಯಿಂದ ಸಾವನ್ನಪ್ಪಿದ್ದಾರೆ.
ಕಾಡಾನೆ ದಾಳಿಯಿಂದ ಮಹಿಳೆ ಮೃತಪಟ್ಟ ಬಳಿಕ ಸ್ಥಳಕ್ಕೆ ಬಂದ ಗ್ರಾಮಸ್ಥರು, ಸಾಮಾಜಿಕ ಹೋರಾಟಗಾರರು ಹಾಗೂ ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಧರಣಿ ನಡೆಸಿದ್ದಾರೆ. ಕಾಡಾನೆ ದಾಳಿಯಿಂದ ಮೃತಪಟ್ಟ ಶೋಭಾ ಕುಟುಂಬಕ್ಕೆ ನ್ಯಾಯ ಬೇಕು, ಐವತ್ತು ಲಕ್ಷ ಪರಿಹಾರ ಸಿಗಲಿ ಎಂದು ಬರಹ ಅಂಟಿಸಿ ಹೋರಾಟ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡಾನೆಯ ದಾಳಿ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿ ಎಂದು ಪ್ರತಿಭಟನಾಕಾರರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ನಮಗೆ ನ್ಯಾಯ ಬೇಕು ಎಂದು ಹೋರಾಡಿದರೂ, ಕೇಸ್ ದಾಖಲು ಮಾಡುತ್ತಾರೆ ಎಂದು ಜನರು ಆರೋಪಿಸಿದ್ದಾರೆ. ಹಾಸನ ಜಿಲ್ಲಾ ಅರಣ್ಯಾಧಿಕಾರಿ ಸೌರಭ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾಡಾನೆ ದಾಳಿಯಿಂದ ಸಾವನ್ನಪ್ಪಿದ ಕುಟುಂಬಸ್ಥರೊಂದಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಮಹಿಳೆ ತಾಯಿಯೊಂದಿಗೆ ಮಾತನಾಡಿ ಸಾಂತ್ವಾನ ಹೇಳಿದ್ದಾರೆ.
ಜೀವ ಅತ್ಯಮೂಲ್ಯವಾದದ್ದು, ಜೀವವನ್ನು ಮತ್ತೆ ತರುವುದಕ್ಕೆ ಸಾಧ್ಯವಿಲ್ಲ. ನಾವೆಲ್ಲಾ ನಿಮ್ಮ ಜೊತೆಯಲ್ಲಿದ್ದೇವೆ . ಸರ್ಕಾರದಿಂದ ಏನೇನು ಸವಲತ್ತುಗಳು ಬೇಕೋ ಅವೆಲ್ಲವನ್ನೂ ಒದಗಿಸುತ್ತೇವೆ . ನಾನು ಶೀಘ್ರ ನಿಮ್ಮ ಮನೆಗೆ ಬಂದು ಭೇಟಿಯಾಗುತ್ತೇನೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸಾಂತ್ವನ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us