/newsfirstlive-kannada/media/media_files/2025/09/03/bhanu-musthak-2025-09-03-16-19-53.jpg)
ಹಾಸನ: ಮೈಸೂರು ದಸರಾ (Mysuru Dasara) ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಭಾನು ಮುಷ್ತಾಕ್ (Banu Mushtaq) ಅವರನ್ನು ಸರ್ಕಾರ ಆಯ್ಕೆ ಮಾಡಿದೆ. ಇಂದು ದಸರಾ ಸಮಿತಿ ಬಾನು ಮುಷ್ತಾಕ್ ನಿವಾಸಕ್ಕೆ ಭೇಟಿಯಾಗಿ, ಅಧಿಕೃತವಾಗಿ ಆಹ್ವಾನಿಸಿದೆ.
ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಚಾಮುಂಡೇಶ್ವರಿ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರೂಪಾ ಮತ್ತು ಮೈಸೂರು ಜಿಲ್ಲಾಡಳಿತ ನೇತೃತ್ವದ ತಂಡವು ಅಮೀರ್ ಮೊಹಲ್ಲಾದಲ್ಲಿರುವ ಭಾನು ಮುಷ್ತಾಕ್ ನಿವಾಸಕ್ಕೆ ಆಗಮಿಸಿ, ಆಹ್ವಾನ ನೀಡಿದೆ.
ಕುಟುಂಬ ಸಮೇತರಾಗಿ ದಸರಾಗೆ ಬರಬೇಕೆಂದು ಡಿ.ಸಿ ಲಕ್ಷ್ಮಿಕಾಂತರೆಡ್ಡಿ ಆಹ್ವಾನ ನೀಡಿದ್ದಾರೆ. ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಆನೆ ವಿಗ್ರಹ ನೀಡಿ ಕರೆಯೋಲೆ ಕೊಟ್ಟಿದ್ದಾರೆ. ದಸರಾ ಆಹ್ವಾನವನ್ನು ಪ್ರೀತಿಯಿಂದ ಸ್ವೀಕರಿಸಿದ ಬಾನು ಮುಷ್ತಾಕ್, ಬರುವುದಾಗಿ ತಿಳಿಸಿದ್ದಾರೆ.
ಇತ್ತೀಚೆಗೆ ದಸರಾ ಉದ್ಘಾಟನೆಗೆ ತಮ್ಮನ್ನು ಆಯ್ಕೆ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಅವರು..
ಖಂಡಿತಾ ನನಗೆ ಖುಷಿ ವಿಚಾರ. ದಸರಾವನ್ನು ನಾವು ಹಲವು ಪ್ರಭೇದಗಳಲ್ಲಿ ನೋಡಬಹುದು. ನೀವು ಚಾಮುಂಡೇಶ್ವರಿ ತಾಯಿ ಅಂತಿರಿ, ನಿಮ್ಮ ಭಾವವನ್ನು ಗೌರವಿಸುತ್ತೇನೆ. ಅನೇಕರು ಇದನ್ನ ನಾಡಹಬ್ಬ ಅಂತಾರೆ, ಅದನ್ನು ಗೌರವಿಸುತ್ತೇನೆ. ನಾಡಹಬ್ಬ, ಚಾಮುಂಡೇಶ್ವರಿ ತಾಯಿ ಎಂದು ಪ್ರೀತಿ, ಅಭಿಮಾನದಿಂದ ಕರೀತೀರಿ. ಇದು ನಮ್ಮ ಸಂಸ್ಕೃತಿಯ ಭಾಗವೇ ಆಗಿದೆ, ನಾಡಿನ ಭಾಗವಾಗಿದೆ. ಹಾಗಾಗಿ ಇದು ನನಗೂ ಪ್ರಿಯವಾಗಿದೆ. ನಾನು ಗೌರವಿಸುವ ಹಬ್ಬವಾಗಿದೆ. ಪ್ರೀತಿಯಿಂದ ಭಾಗಿಯಾಗುವ ಹಬ್ಬವಾಗಿದೆ. ನಾನು ತಂದೆ ತಾಯಿ ಜೊತೆ ಹಲವು ಬಾರಿ ಜಂಬು ಸವಾರಿ ನೋಡಲು ಹೋಗ್ತಿದ್ದೆ. ಈಗ ನಾನೇ ದಸರಾ ಉದ್ಘಾಟನೆ ಸಂದರ್ಭದ ಆಹ್ವಾನ ಬಂದಿದೆ. ನನಗೆ ಸಂತೋಷವಾಗಿದೆ.
ಬಾನು ಮುಷ್ತಾಕ್, ಹಿರಿಯ ಸಾಹಿತಿ
ಇದನ್ನೂ ಓದಿ:ದಸರಾ ಉದ್ಘಾಟನೆಗೆ ತಕರಾರು; ಬಾನು ಮುಷ್ತಾಕ್ ಹೇಳಿದ್ದೇನು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ