ಅನೈತಿಕ ಸಂಬಂಧಕ್ಕಾಗಿ ಹೆತ್ತ ಮಗಳ ಉಸಿರು ನಿಲ್ಲಿಸಿದ ಪಾಪಿ ತಾಯಿ

ತನ್ನ ಪ್ರಿಯಕರನ ಜೊತೆ ಸೇರಿ ಮುಗದ್ಧ ಕಂದಮ್ಮನನ್ನು ದುರುಳ ತಾಯಿ ಕೊಂ*ದಿದ್ದಾಳೆ. ಬಾಲಕಿಯ ದೇಹ ಅರ್ಧ ಸುಟ್ಟು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಷ್ಟಕ್ಕೆಲ್ಲ ಕಾರಣ ಅಕ್ರಮ ಸಂಬಂಧ!

author-image
Ganesh Kerekuli
haveri kid
Advertisment

ಹಾವೇರಿ: ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಆನ್ವೇರಿ ಗ್ರಾಮದಲ್ಲಿ ಹೆತ್ತ ತಾಯಿಯೇ ತನ್ನ ಮಗುವನ್ನು ಕೊಂದ ಹೇಯ ಕೃತ್ಯ ಬೆಳಕಿಗೆ ಬಂದಿದೆ. 

ಆಗಸ್ಟ್ 5 ರಂದು ತಾಯಿ ಗಂಗಮ್ಮ ಮತ್ತು ಪ್ರಿಯಕರ ಅಣ್ಣಪ್ಪ ಮಡಿವಾಳರ ಸೇರಿ 4 ವರ್ಷದ ಪ್ರಿಯಾಂಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ತುಂಗಾ ಮೇಲ್ದಂಡೆ ಕಾಲುವೆಯ ಬಳಿ ಸುಟ್ಟುಹಾಕಲು ಪ್ರಯತ್ನಿಸಿದ್ದಾರೆ.

ಯಾವಾಗ ಪ್ರಕರಣ ಬೆಳಕಿಗೆ?

ಪತಿಯನ್ನು ಬಿಟ್ಟು ಪ್ರಿಯಕರನೊಂದಿಗೆ ಗಂಗಮ್ಮ ವಾಸವಾಗಿದ್ದಳು. ಈ ಸಮಯದಲ್ಲಿ ಗಂಡ ತನಗೆ  ಮಗಳನ್ನಾದರೂ ಕೊಡು‌ ಎಂದು ಹೋದಾಗ ಪ್ರಕರಣ ಬೆಳೆಕಿಗೆ ಬಂದಿದೆ. ಸದ್ಯ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳಾದ ಗಂಗಮ್ಮ ಮತ್ತು ಅಣ್ಣಪ್ಪನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ:ಮಂಡ್ಯದಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಸಂಭ್ರಮ.. ಪೊಲೀಸರಿಂದ ಭದ್ರತೆ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Haveri news
Advertisment