/newsfirstlive-kannada/media/media_files/2025/12/16/ramanagara-2025-12-16-08-58-08.jpg)
ರಾಮನಗರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನ ಕೊಂ*ದು ಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಹಾಗಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ನವೀನ್ ಕುಮಾರ್ ಹಾಗೂ ವತ್ಸಲ ಮೃತ ದಂಪತಿ. ಕಳೆದ 8 ವರ್ಷದ ಹಿಂದೆ ಮದುವೆಯಾಗಿದ್ದರು. ಸಣ್ಣ ಪುಟ್ಟ ವಿಚಾರಕ್ಕೆ ಜಗಳವಾಡ್ತಿದ್ದ ದಂಪತಿ ಕಳೆದ ವಾರ ಗಲಾಟೆ ಮಾಡಿಕೊಂಡು ಮಹಿಳಾ ಠಾಣೆ ಮೆಟ್ಟಿಲೇರಿದ್ದರು. ಇತ್ತ ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿ ವತ್ಸಲಳ ಕತ್ತು ಹಿಸುಕಿ ಪತಿ ನವೀನ್ ಕುಮಾರ್ ಕೂಡ ಆತ್ಮ*ತ್ಯೆಗೆ ಶರಣಾಗಿದ್ದಾನೆ.
ಈ ದಂಪತಿಗೆ 7 ವರ್ಷದ ಒಂದು ಹೆಣ್ಣುಮಗು ಇದೆ. ಸಣ್ಣಪುಟ್ಟ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ಆಗುತ್ತಿತ್ತು. ಅಂತೆಯೇ ಕಳೆದ ವಾರವೂ ಗಲಾಟೆ ಮಾಡಿಕೊಂಡು ಠಾಣೆ ಮೆಟ್ಟಿಲೇರಿದ್ದರು. ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹ ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us