/newsfirstlive-kannada/media/post_attachments/wp-content/uploads/2024/10/RAIN-SCHOOL.jpg)
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಬೆಳಗಾವಿ, ಹುಬ್ಬಳ್ಳಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ:ಶಿವಮೊಗ್ಗದ ರಿಪ್ಪನ್ ಪೇಟೆಯಲ್ಲಿ ಸುಜಾತ, ಅನನ್ಯಾ ಭಟ್ ಕುಟುಂಬದ ಬಗ್ಗೆ ಎಸ್‌ಐಟಿ ತನಿಖೆ, ಸಿಕ್ಕ ಮಾಹಿತಿ ಏನು ಗೊತ್ತಾ?
ಬೆಳಗಾವಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರೋ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿ-ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಹುಬ್ಬಳ್ಳಿ, ಧಾರವಾಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಹೀಗಾಗಿ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭುರಿಂದ ಆಗಸ್ಟ್ 20ರಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪಿಯು ಕಾಲೇಜು ಮತ್ತು ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಇಂದು ಸಹ ಜಿಲ್ಲಾಡಳಿತದಿಂದ ರಜೆ ಘೋಷಣೆ ಮಾಡಲಾಗಿತ್ತು. ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ನಾಳೆಯೂ ರಜೆ ಘೋಷಣೆ ಮಾಡಲಾಗಿದೆ. ಈ ರಜಾ ದಿನವನ್ನು ಮುಂದಿನ ಸಾರ್ವತ್ರಿಕ ರಜಾ ದಿನಗಳಲ್ಲಿ ವರ್ಗಾವಣೆಗೆ ಸೂಚನೆ ನೀಡಲಾಗಿದೆ.
ಇನ್ನೂ, ಹಾವೇರಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರೋ ಹಿನ್ನೆಲೆಯಲ್ಲಿ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಿರಂತರ ಮಳೆ, ಹಾಗೂ ಶೀತ ಗಾಳಿ ಬೀಸುತ್ತಿರುವುದರಿಂದ ನಾಳೆ ರಜೆ ಘೋಷಣೆ ಮಾಡಿವ ಎಂದು ಹಾವೇರಿ ಡಿಸಿ ವಿಜಯ್ ಮಹಾಂತೇಶ್ ಆದೇಶ ಕೊಟ್ಟಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ