/newsfirstlive-kannada/media/media_files/2025/08/18/rain-alert-2025-08-18-10-21-50.jpg)
ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು ಹವಾಮಾನ ಇಲಾಖೆ ಅಲರ್ಟ್ ನೀಡಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕ್ಯಾಪಿಟಲ್ ಸಿಟಿ ಬೆಂಗಳೂರಿನಲ್ಲೂ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉತ್ತರ ಒಳನಾಡು ಹಾಗು ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಎಂದು ಎಚ್ಚರಿಕೆ ನೀಡಿದೆ. ಗಾಳಿಯು ಗಂಟೆಗೆ 30 ರಿಂದ 40 ಕಿಲೋ ಮೀಟರ್​ ವೇಗದಲ್ಲಿ ಬೀಸಲಿದೆ. ಈ ಹಿನ್ನಲೆ ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರ ನೀಡಿದೆ.
ಮಾತ್ರವಲ್ಲ ಕಳೆದ ಮೂರ್ನಾಲ್ಕು ದಿನಗಳಿಂದ ಮಲೆನಾಡು ಭಾಗದಲ್ಲೂ ಮಳೆಯಾಗುತ್ತಿದ್ದು, ದೈನಂದಿನ ಜನ ಜೀವನಕ್ಕೆ ತೊಂದರೆ ಆಗುತ್ತಿದೆ. ಈಗಾಗಲೇ ಮುಂಗಾರು ಬಿತ್ತನೆ ಕಾರ್ಯ ಮುಗಿಸಿರುವ ರೈತರು, ಹಿಂಗಾರು ಬೆಳೆಯ ನಿರೀಕ್ಷೆಯಲ್ಲಿದ್ದಾರೆ. ಆದರೆ ಮಳೆ ಬಿಟ್ಟೂ ಬಿಡದೇ ಕಾಟ ಕೊಡ್ತಿರೋದು ರೈತಾಪಿ ವರ್ಗವನ್ನು ಆತಂಕಕ್ಕೆ ತಳ್ಳಿದೆ.