ರಾಜ್ಯದಲ್ಲಿ ಮುಂದುವರೆದ ಭಾರೀ ಮಳೆ.. ಈ ಜಿಲ್ಲೆಗಳ ಅಂಗನವಾಡಿ, ಶಾಲಾ- ಕಾಲೇಜುಗಳಿಗೆ ರಜೆ

ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಧಾರಾಕಾರವಾದ ಮಳೆ ಮುಂದುವರೆದಿದ್ದು ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಆಯಾಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

author-image
Bhimappa
RAINS_KARNATAKA
Advertisment

ಕೊಡಗು: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ನಾಳೆ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಧಾರಾಕಾರವಾದ ಮಳೆ ಮುಂದುವರೆದಿದ್ದು ಮಕ್ಕಳ ಸುರಕ್ಷತಾ ದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ. 

ಕೊಡಗು ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆ‌ ಹಿನ್ನೆಲೆಯಲ್ಲಿ ನಾಳೆ ಕೊಡಗಿನ ಅಂಗನವಾಡಿ, ಶಾಲೆ ಮತ್ತು ಕಾಲೇಜುಗಳಿಗೆ ರಜೆ‌ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ವೆಂಕಟರಾಜ ಅವರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. 

ಬೆಳಗಾವಿ ಜಿಲ್ಲೆಯಲ್ಲೂ ಮಳೆಯ ಅಬ್ಬರ ಮುಂದುವರೆದಿದ್ದರಿಂದ ಜಿಲ್ಲೆಯ‌ 8 ತಾಲೂಕಿನ ‌ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ.  ಬೆಳಗಾವಿ, ಬೈಲಹೊಂಗಲ, ಕಿತ್ತೂರು, ಖಾನಾಪುರ, ಸವದತ್ತಿ, ರಾಮದುರ್ಗ, ಚಿಕ್ಕೋಡಿ ಹಾಗೂ ಹುಕ್ಕೇರಿ ತಾಲೂಕಿನ ಶಾಲೆಗಳಿಗೆ ರಜೆ ಇರುತ್ತದೆ. ಅದರಂತೆ ಬೆಳಗಾವಿ, ಬೈಲಹೊಂಗಲ, ಕಿತ್ತೂರು, ಖಾನಾಪುರ, ರಾಮದುರ್ಗ ಹಾಗೂ ಸವದತ್ತಿಯ ಶಾಲೆಗಳ ಜೊತೆಗೆ ಪದವಿ ಪೂರ್ವ ಕಾಲೇಜಿಗಳಿಗೂ ರಜೆ ಘೋಷಣೆ ಮಾಡಲಾಗಿದೆ ಎಂದು ಬೆಳಗಾವಿಯ ಜಿಲ್ಲಾಧಿಕಾರಿ ಮೊಹಮ್ಮದ್ ‌ರೋಷನ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ಧರ್ಮಸ್ಥಳ ಕೇಸ್; ಬುರುಡೆ ಕೊಟ್ಟು ಸುಳ್ಳು ಹೇಳುವಂತೆ ಒತ್ತಾಯ.. ಅನಾಮಿಕ ಸ್ಫೋಟಕ ಹೇಳಿಕೆ

karnatka rain

ಧಾರವಾಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ‌ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಿ  ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಕೊಟ್ಟಿದ್ದನ್ನ ಹೊಂದಾಣಿಕೆ ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ. 

ಉತ್ತರ ಕನ್ನಡದಲ್ಲಿ ಭಾರೀ ವರುಣಾರ್ಭಟ ಮುಂದುವರೆದಿದ್ದು 11 ತಾಲೂಕುಗಳ ಶಾಲಾ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಿದೆ. ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ, ಹಳಿಯಾಳ ಹಾಗೂ ಜೋಯಿಡಾ ತಾಲೂಕಿನಲ್ಲಿ ರಜೆ ಇರುತ್ತದೆ. ನಿರಂತರ ಮಳೆಯಿಂದಾಗಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Heavy Rain Karnataka Rains
Advertisment