/newsfirstlive-kannada/media/post_attachments/wp-content/uploads/2025/01/KSRTC-Fair-Hike.jpg)
ಬೆಂಗಳೂರು: ಸಾರಿಗೆ ನೌಕರರ ಜೊತೆಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಂಧಾನ ಸಭೆ ವಿಫಲಗೊಂಡ ಬೆನ್ನಲ್ಲೇ ಮುಷ್ಕರಕ್ಕೆ ಕರೆ ಕೊಡಲಾಗಿತ್ತು. ಆದ್ರೆ ಇದೀಗ ಮುಷ್ಕರ ಮುಂದೂಡಿಕೆ ಮಾಡುವಂತೆ ಹೈಕೋರ್ಟ್​ ಸೂಚನೆ ನೀಡಿದೆ.
/filters:format(webp)/newsfirstlive-kannada/media/post_attachments/wp-content/uploads/2023/06/HIGHCOURT.jpg)
ನಾಳೆ ಸಾರಿಗೆ ಮುಷ್ಕರ ಮುಂದೂಡಿಕೆ ಮಾಡುವಂತೆ ಹೈಕೋರ್ಟ್ ಸೂಚನೆ ನೀಡಿದೆ. ನಾಳಿನ ಸಾರಿಗೆ ನೌಕರರ ಪ್ರತಿಭಟನೆ ಪ್ರಶ್ನಿಸಿ ವಕೀಲ ಎನ್ ಪಿ ಅಮೃತೇಶ್ ಮತ್ತಿತರರಿಂದ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಿಸಿದ ಹೈಕೋರ್ಟ್​, ಒಂದು ದಿನದ ಮಟ್ಟಿಗೆ ಮುಷ್ಕರವನ್ನ ಮುಂದೂಡುವಂತೆ ಸೂಚನೆ ನೀಡಿದೆ.
ಹೀಗಾಗಿ ನಾಳೆ ಬಹುತೇಕ ಸರ್ಕಾರಿ ಬಸ್​ಗಳು ಎಂದಿನಂತೆ ಓಡಾಟ ನಡೆಸಲಿವೆ. ನಾಳೆ ಒಂದು ದಿನ ನೌಕರರು ಮುಷ್ಕರದಲ್ಲಿ ಭಾಗಿಯಾಗಲ್ಲ. ಕೋರ್ಟ್ ನಿರ್ದೇಶನ ಹಿನ್ನೆಲೆ ನಾಳೆ ಮುಷ್ಕರ ಇರುವುದಿಲ್ಲ ಎಂದು ನ್ಯೂಸ್ ಫಸ್ಟ್​ಗೆ ಬಂದ್​ಗೆ ಕರೆ ಕೊಟ್ಟ ಜಂಟಿ ಕ್ರಿಯಾ ಸಮಿತಿ ಮಾಹಿತಿ ನೀಡಿದೆ.
/filters:format(webp)/newsfirstlive-kannada/media/media_files/2025/08/04/bmtc-strike-2025-08-04-12-49-12.jpg)
ಸಾರಿಗೆ ನೌಕರರ ಬೇಡಿಕೆಗಳು?
- 38 ತಿಂಗಳ ವೇತನದ ಅರಿಯರ್ಸ್ ಬಾಕಿ ಹಣ ನೀಡಬೇಕು
- ಸರ್ಕಾರಿ ನೌಕರರಿಗೆ ನೀಡುವ ವೇತನಕ್ಕೆ ಸರಿಸಮಾನ ವೇತನ ನೀಡಬೇಕು
- ಖಾಸಗೀಕರಣ ಭ್ರಷ್ಟಾಚಾರ ಕಾರ್ಮಿಕರ ಕಿರುಕುಳ ನಿಲ್ಲಬೇಕು
- ನಗದು ರಹಿತ ವೈದ್ಯಕೀಯ ಸೌಲಭ್ಯ
- ನಮ್ಮ ಹಕ್ಕಿನ ರಜೆ
- 1-1-2024 ರಿಂದ ವೇತನ ಜಾರಿಗೊಳಿಸುವುದು
- ಉತ್ತಮ ಕ್ಯಾಂಟೀನ್ ವ್ಯವಸ್ಥೆ
- ಈ ಹಿಂದೆ 2020 ಮತ್ತು 2021 ರ ಸಾರಿಗೆ ಮುಷ್ಕರ ಸಂದರ್ಭದಲ್ಲಿ ನೌಕರರ ಮೇಲೆ ಹಾಕಲಾಗಿರುವ
- ಎಲ್ಲಾ ಮೊಕದ್ದಮೆಗಳನ್ನು ಹಿಂತೆಗೆದುಕೊಳ್ಳಬೇಕು
- ಸಾರಿಗೆ ನಿಗಮದ ವಿದ್ಯುತ್ ಬಸ್‌ಗಳಲ್ಲಿ ಸಂಸ್ಥೆಯ ಚಾಲಕರನ್ನೇ ಚಾಲನಾ ಕೆಲಸಕ್ಕೆ ನಿಯೋಜಿಸಬೇಕು
- ಈ ಬಸ್‌ಗಳ ನಿರ್ವಹಣೆಯನ್ನು ಖಾಸಗಿ ಗುತ್ತಿಗೆದಾರರಿಗೆ ನೀಡುವ ಪದ್ದತಿ ಕೈಬಿಡಬೇಕು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us