/newsfirstlive-kannada/media/post_attachments/wp-content/uploads/2024/10/RAIN-SCHOOL-1.jpg)
ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮುಂಜಾಗ್ರತೆ ಕ್ರಮವಾಗಿ ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ನಿರಂತರವಾಗಿ ಕೊಡಗು ಜಿಲ್ಲೆಯುಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಇಂದು ಕೊಡಗಿನ ಶಾಲೆ, ಅಂಗನವಾಡಿ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ:ಕೈಕೊಟ್ಟ ಬುರುಡೆ ಗ್ಯಾಂಗ್.. ಏಕಾಂಗಿಯಾದ ಸುಜಾತಾ ಭಟ್!
ಇನ್ನು, ಬೀದರ್ ಜಿಲ್ಲೆಯಾದ್ಯಂತ ನಿರಂತರ ಮಳೆ, ನೆರೆ ಸ್ಥಿತಿ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ ಹಿನ್ನೆಲೆಯಲ್ಲಿ ರಜೆ ಘೋಷಿಸಿ ಮಾಡಲಾಗಿದೆ. ಕಳೆದ 3 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವ್ಯಾಪಕ ಮಳೆ ಹಿನ್ನೆಲೆ ಜಿಲ್ಲಾಡಳಿತ ಮುಂಜಾಗೃತಾ ಕ್ರಮವಾಗಿ ರಜೆ ಘೋಷಣೆ ಮಾಡಿದೆ.
ಇತ್ತ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗಾಗಿ ಜಿಲ್ಲೆಯ 3 ತಾಲೂಕುಗಳ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಮಳೆ ಹೆಚ್ಚಿರುವ ಹಿನ್ನೆಲೆಯಲ್ಲಿ ಮುಂಜಾಗೃತೆ ವಹಿಸುವಂತೆ ಹವಾಮಾನ ಸೂಚನೆ ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ