/newsfirstlive-kannada/media/media_files/2025/09/25/sl-byrappa-2025-09-25-07-05-51.jpg)
ಕನ್ನಡ ಸಾಹಿತ್ಯ ಲೋಕದ ದೈತ್ಯ ಪ್ರತಿಭೆ.. ಅಕ್ಷರ ಲೋಕದ ತತ್ವಜ್ಞಾನಿ, ಸರಸ್ವತಿ ಸಮ್ಮಾನ್ ಪುರಸ್ಕೃತ, ಪದ್ಮಭೂಷಣ ಡಾ.ಎಸ್.ಎಲ್. ಭೈರಪ್ಪ ವಿಧಿವಶರಾಗಿದ್ದಾರೆ. ಕಾಂದಬರಿಗಳ ಮೂಲಕ ಕನ್ನಡದ ಕೀರ್ತಿ ಪತಾಕೆಯನ್ನು ಜಗದಗಲ ಹಾರಿಸಿದ ಆ ಚೇತನ ಇನ್ನು ನೆನಪು ಮಾತ್ರ. ತಮ್ಮ 94ನೇ ವಯಸ್ಸಿನಲ್ಲಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಭೈರಪ್ಪನವರ ನಿಧನದಿಂದ ಕನ್ನಡ ಸಾರಸ್ವತ ಲೋಕ ಅಕ್ಷರಶಃ ಬಡವಾಗಿದೆ.
ಇಂದು ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪನವರ ಪಾರ್ಥಿವ ಶರೀರವನ್ನು ರಾತ್ರಿಯಿಡೀ ಆಸ್ಪತ್ರೆಯಲ್ಲೇ ಇರಿಸಲಾಗಿತ್ತು.. ಕೆಲವರು ಆಸ್ಪತ್ರೆಗೆ ತೆರಳಿ ಅಂತಿಮ ದರ್ಶನವನ್ನು ಪಡೆದ್ರು. ಇಂದು ಬೆಳಗ್ಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಅಂತಿಮ ನಮನ ಸಲ್ಲಿಸಬಹುದು. ಬಳಿಕ ಮೈಸೂರಿಗೆ ಪಾರ್ಥಿವ ಶರೀರ ರವಾನೆ ಆಗಲಿದ್ದು, ಮೈಸೂರಿನ ಕಲಾಮಂದಿರದಲ್ಲೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
/filters:format(webp)/newsfirstlive-kannada/media/media_files/2025/09/24/sl-byrappa-2025-09-24-14-54-21.jpg)
ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರ ಅಗಲಿಕೆಗೆ ಪ್ರಧಾನಿ ಮೋದಿ ಸೇರಿದಂತೆ ರಾಜಕೀಯ ಗಣ್ಯರು, ಸಾಹಿತಿಗಳು ಸಂತಾಪ ಸೂಚಿಸಿದ್ದಾರೆ. ವಿಪಕ್ಷ ನಾಯಕ ಆರ್​.ಅಶೋಕ್​ ಕೂಡ ರಾಷ್ಟ್ರೋತ್ಥಾನ ಆಸ್ಪತ್ರೆಗೆ ಭೇಟಿ ನೀಡಿ, ಅಂತಿಮ ನಮನ ಸಲ್ಲಿಸಿದ್ರು.. ಸಂಸದ ಡಾ.ಮಂಜುನಾಥ್​, ಟಿ.ಎನ್​.ಸೀತಾರಾಮ್​ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ರು.
ನಾಳೆ ಮೈಸೂರಿನಲ್ಲಿ ಎಸ್​ಎಲ್​ ಭೈರಪ್ಪ ಅಂತ್ಯಕ್ರಿಯೆ
ಎಸ್​ಎಲ್​​ ಭೈರಪ್ಪನವರು ಹಾಸನ ಜಿಲ್ಲೆಯಲ್ಲೇ ಹುಟ್ಟಿದ್ರೂ.. ತಮ್ಮ ವಿಶ್ರಾಂತ ಜೀವನವನ್ನು ಮೈಸೂರಿನಲ್ಲಿ ಕಳೆಯುತ್ತಿದ್ದರು. ಹೀಗಾಗಿ ಮೈಸೂರಿನಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಭೈರಪ್ಪನ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ. ವಿದೇಶದಲ್ಲಿರುವ ಭೈರಪ್ಪನವರ ಮಗ, ನಾಳೆ ಮುಂಜಾನೆ ಮೈಸೂರಿಗೆ ಆಗಮಿಸಲಿದ್ದು, ಚಾಮುಂಡಿ ತಪ್ಪಲಿನಲ್ಲಿರೋ ಹರಿಶ್ಚಂದ್ರ ಘಾಟ್​ನಲ್ಲಿ ಅಂತಿಮ ವಿಧಿವಿಧಾನ ನಡೆಯಲಿದೆ. ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರ ಅಗಲಿಕೆ ನೋವು ತರಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us