Advertisment

Breaking ರೇಣುಕಾಸ್ವಾಮಿ ಪ್ರಕರಣದ ಆರೋಪಿ ದರ್ಶನ್ ಮತ್ತೆ ಅರೆಸ್ಟ್

ಸುಪ್ರೀಂ ಕೋರ್ಟ್​ ಜಾಮೀನು ರದ್ದು ಮಾಡಿದ ಬೆನ್ನಲ್ಲೇ ರೇಣುಕಾಸ್ವಾಮಿ ಪ್ರಕರಣದ ಆರೋಪಿ ದರ್ಶನ್ ಮತ್ತೆ ಅರೆಸ್ಟ್ ಆಗಿದ್ದಾರೆ. ಹೊಸಕೆರೆಹಳ್ಳಿಯಲ್ಲಿರುವ ಪತ್ನಿ ವಿಜಲಕ್ಷ್ಮೀ ಅವರ ನಿವಾಸದಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ.

author-image
Bhimappa
actor darshan case

ನಟ ದರ್ಶನ್

Advertisment

ಸುಪ್ರೀಂ ಕೋರ್ಟ್​ ಜಾಮೀನು ರದ್ದು ಮಾಡಿದ ಬೆನ್ನಲ್ಲೇ ರೇಣುಕಾಸ್ವಾಮಿ ಪ್ರಕರಣದ ಆರೋಪಿ ದರ್ಶನ್ ಮತ್ತೆ ಅರೆಸ್ಟ್ ಆಗಿದ್ದಾರೆ. ಹೊಸಕೆರೆಹಳ್ಳಿಯಲ್ಲಿರುವ ಪತ್ನಿ ವಿಜಯಲಕ್ಷ್ಮೀ ನಿವಾಸದಲ್ಲಿ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. 

Advertisment

ಸುಪ್ರೀಂ ಕೋರ್ಟ್​ನಿಂದ ಮಹತ್ವದ ತೀರ್ಪು

ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರೆ 7 ಆರೋಪಿಗಳಿಗೆ ಹೈಕೋರ್ಟ್​ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ, ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ಇದೀಗ ಸುಪ್ರೀಂ ಕೋರ್ಟ್​ ತೀರ್ಪು ನೀಡಿದ್ದು ನಟ ದರ್ಶನ್​, ಪವಿತ್ರಾ ಗೌಡ ಹಾಗೂ 7 ಆರೋಪಿಗಳ ಜಾಮೀನು ಅನ್ನು ರದ್ದು ಮಾಡಿದೆ.

ಇದನ್ನೂ ಓದಿ:ಪವಿತ್ರ ಗೌಡ ಸೇರಿ ಒಟ್ಟು ನಾಲ್ವರು ಅರೆಸ್ಟ್.. ಅನ್ನಪೂರ್ಣ ಪೊಲೀಸ್ ಠಾಣೆಯಲ್ಲಿ ಆರೋಪಿಗಳು

DARSHAN_PAVITRA

ಇವತ್ತು ಸುಪ್ರೀಂ ಕೋರ್ಟ್​​ನಲ್ಲಿ ರೇಣುಕಾಸ್ವಾಮಿ ಪ್ರಕರಣದ ಆರೋಪಿ ದರ್ಶನ್, ಪವಿತ್ರಾಗೌಡ ಹಾಗೂ 7 ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರದ ಅರ್ಜಿಯ ಆದೇಶ ಹೊರ ಬಿದ್ದಿದೆ. ಹೈಕೋರ್ಟ್​ ತೀರ್ಪಿನಲ್ಲಿ ದೋಷವಿದೆ ಎಂದು ಸುಪ್ರೀಂ ಕೋರ್ಟ್​ ಹೇಳಿದೆ. ಈ ಪ್ರಕರಣವನ್ನು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಜೆ.ಬಿ ಪರ್ದಿವಾಲಾ ಹಾಗೂ ನ್ಯಾಯಾಮೂರ್ತಿ ಮಹಾದೇವನ್ ಪೀಠ ತೀರ್ಪು ನೀಡಿದೆ. ಜಾಮೀನು ರದ್ದು ಹಿನ್ನೆಲೆಯಲ್ಲಿ ಆರೋಪಿಗಳಾದ ದರ್ಶನ್, ಪವಿತ್ರ ಗೌಡ, ಪ್ರದೂಷ್, ನಾಗರಾಜ್, ಲಕ್ಷ್ಮಣ್, ಅನುಕುಮಾರ್ ಹಾಗೂ ಜಗದೀಶ್ ಮತ್ತೆ ಜೈಲು ಸೇರಬೇಕಾಗಿದೆ.  

Advertisment

ಇದನ್ನೂ ಓದಿ:ಸುಪ್ರೀಂ ಕೋರ್ಟ್​ ಮಹತ್ವದ ತೀರ್ಪು.. ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ​ ಜಾಮೀನು ರದ್ದು


ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Actor Darshan Pavitra Gowda Pavitra Gowda tattoo Murder case Darshan in jail
Advertisment
Advertisment
Advertisment