/newsfirstlive-kannada/media/media_files/2025/08/15/cm_siddaramaiah_3-2025-08-15-09-44-54.jpg)
ಬೆಂಗಳೂರು: ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಸಿಎಂ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣದ ಬಳಿಕ ಮಾತನಾಡಿದ ಸಿಎಂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ, ಕೇಂದ್ರ ಸರ್ಕಾರ ಸರಿಯಾದ ಸಮಯಕ್ಕೆ ಗೊಬ್ಬರ ಪೂರೈಕೆ ಮಾಡಿಲ್ಲ ಎಂದು ಹೇಳಿದ್ದಾರೆ.
ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, 2025-26ನೇ ಸಾಲಿನ ಬಜೆಟ್ನಲ್ಲಿ ಕೃಷಿ ವಲಯಕ್ಕೆ 51,339 ಕೋಟಿ ರೂಪಾಯಿಗಳನ್ನು ನೀಡಿದ್ದೇವೆ. ಕೇಂದ್ರ ಸರ್ಕಾರ ಸರಿಯಾದ ಸಮಯಕ್ಕೆ ಯೂರಿಯಾ ರಸಗೊಬ್ಬರನ್ನು ಪೂರೈಕೆ ಮಾಡಿಲ್ಲ. ಇದರಿಂದ ರಾಜ್ಯದಲ್ಲಿ ರೈತರಿಗೆ ಗೊಬ್ಬರದ ಸಮಸ್ಯೆ ಆಯಿತು. ರಾಜ್ಯದಲ್ಲಿ ಉತ್ತಮವಾದ ಮಳೆ ಆಗಿದ್ದು ನದಿ, ಅಣೆಕಟ್ಟುಗಳು ಎಲ್ಲ ತುಂಬಿವೆ. ಕಳೆದ ವರ್ಷಕ್ಕಿಂತ ಈ ವರ್ಷ ಬಿತ್ತನೆ ಕೂಡ ಹೆಚ್ಚಾಗಿದೆ. ಆದರೆ ಕೇಂದ್ರ ಸರ್ಕಾರದಿಂದ ನಮಗೆ ಗೊಬ್ಬದ ಸಮಸ್ಯೆ ಆಯಿತು ಎಂದು ಹೇಳಿದ್ದಾರೆ.
ಇದನ್ನೂ ಓದಿ:ದೆಹಲಿಯ ಕೆಂಪು ಕೋಟೆಯಲ್ಲಿ 12ನೇ ಬಾರಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ
ರಿವಾರ್ಡ್ ಯೋಜನೆಯಡಿ ಭೂ ಸಂಪನ್ಮೂಲ ಸಮೀಕ್ಷೆ ಕೈಗೊಳ್ಳಲಾಗಿದೆ. 18 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಭೂ ಸಂಪನ್ಮೂಲ ಸಮೀಕ್ಷೆ ಕೈಗೊಳ್ಳಲಾಗಿದೆ. ನಮ್ಮ ಸರ್ಕಾರ ಹೈನುಗಾರಿಕೆಗೆ ಪ್ರೋತ್ಸಾಹ ನೀಡುತ್ತಿದೆ. 53 ಲಕ್ಷ ಮಕ್ಕಳಿಗೆ ರಾಗಿ ಮಾಲ್ಟ್, ಹಾಲು, ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಮಾಡಲು ತೀರ್ಮಾನಿಸಿದ್ದೇವೆ. ಒಳ ಮೀಸಲಾತಿಯನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೇಳಿದ್ದಾರೆ.
ಕರ್ನಾಟಕ ಅಭಿವೃದ್ಧಿ ಮಾದರಿ ಎಂಬ ಹೆಸರಿನಲ್ಲಿ ಮನ್ನಣೆ ದೊರೆತಿದೆ. ವಿಶ್ವಸಂಸ್ಥೆ ಮುಖ್ಯಸ್ಥರಾದ ಫಿಲೆಮಾನ್ ಯಂಗ್ ಕರ್ನಾಟಕಕ್ಕೆ ಬಂದು ಗ್ಯಾರಂಟಿ ಯೋಜನೆ ಬಗ್ಗೆ ಶ್ಲಾಘಿನೆ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳು ಅಭಿವೃದ್ಧಿ ದಿಕ್ಕನ್ನೇ ಬದಲಾಯಿಸಿವೆ. ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹಲಕ್ಷ್ಮಿ, ಗೃಹ ಜ್ಯೋತಿ, ಯುವನಿಧಿ ಯೋಜನೆಗೆ 9,600 ಕೋಟಿ ರೂಪಾಯಿ ವಿನಿಯೋಗ ಮಾಡಲಾಗಿದೆ. 500 ಕೋಟಿ ಟ್ರಿಪ್ ಮೂಲಕ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ನಲ್ಲಿ ಪ್ರಯಾಣ ಮಾಡಿದ್ದಾರೆ. ಕರ್ನಾಟಕ ತಲಾದಾಯದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಭಾಷಣದಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪ ಮಾಡಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ