/newsfirstlive-kannada/media/media_files/2025/08/04/internal-reservation-2-2025-08-04-14-04-19.jpg)
ರಾಜ್ಯ ಸರ್ಕಾರಕ್ಕೆ ಒಳಮೀಸಲು ಸಮೀಕ್ಷಾ ವರದಿ ಸಲ್ಲಿಕೆ ಆಗಿದೆ. ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಲು ಉಪಪಂಗಡಗಳ ಅಂಕಿ-ಅಂಶಗಳ ಸಮೀಕ್ಷೆಗಾಗಿ ರಾಜ್ಯ ಸರ್ಕಾರ ರಚಿಸಿದ್ದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗವು ಇಂದು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ.
/newsfirstlive-kannada/media/media_files/2025/08/04/internal-reservation-12-2025-08-04-14-06-14.jpg)
ರಾಜ್ಯ ಸರ್ಕಾರಕ್ಕೆ ಒಳಮೀಸಲು ಸಮೀಕ್ಷಾ ವರದಿ ಸಲ್ಲಿಕೆ ಆಗಿದೆ. ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಲು ಉಪಪಂಗಡಗಳ ಅಂಕಿ-ಅಂಶಗಳ ಸಮೀಕ್ಷೆಗಾಗಿ ರಾಜ್ಯ ಸರ್ಕಾರ ರಚಿಸಿದ್ದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗವು ಇಂದು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ.
/newsfirstlive-kannada/media/media_files/2025/08/04/internal-reservation-7-2025-08-04-14-07-29.jpg)
ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ.. ಇಂದು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಬಂದು ಸಲ್ಲಿಕೆ ಮಾಡಿದ್ದಾರೆ. ಅದರಲ್ಲಿ ಏನಿದೆ ಅಂತ ಇನ್ನೂ ನೋಡಿಲ್ಲ. ಆಗಸ್ಟ್ 7 ರಂದು ಕ್ಯಾಬಿನೆಟ್ ಮೀಟಿಂಗ್ ಇದೆ. ಅದರಲ್ಲಿ ವರದಿಯನ್ನು ಮಂಡಿಸಿ ಚರ್ಚೆ ಮಾಡ್ತೇವೆ ಅಂತಾ ಭರವಸೆ ನೀಡಿದ್ದಾರೆ.
/newsfirstlive-kannada/media/media_files/2025/08/04/internal-reservation-8-2025-08-04-14-07-52.jpg)
ಸಚಿವ ಹೆಚ್ಡಿ ಮಹದೇವಪ್ಪ ಟ್ವೀಟ್ ಮಾಡಿ.. ಇಂದು ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ರೂಪಿಸಲಾದ ಡಾ.ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಸ್ವೀಕರಿಸಲಾಯಿತು. ಸರ್ಕಾರವು ಚುನಾವಣಾ ಪೂರ್ವದಲ್ಲಿ ನುಡಿದಂತೆ ನಡೆಯುತ್ತಿದ್ದು ಸಾಮಾಜಿಕ ನ್ಯಾಯಕ್ಕೆ ಪೂರಕವಾಗಿ ಕೆಲಸ ಮಾಡಲಿದೆ ಎಂದಿದ್ದಾರೆ.
/newsfirstlive-kannada/media/media_files/2025/08/04/internal-reservation-2025-08-04-14-08-14.jpg)
ಮತ್ತೊಬ್ಬ ಸಚಿವ ಕೆ.ಹೆಚ್. ಮುನಿಯಪ್ಪ ಪ್ರತಿಕ್ರಿಯಿಸಿ.. ಇಂದು ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದ ಡಾ. ನಾಗಮೋಹನ ದಾಸ್ ಆಯೋಗದ ವರದಿಯನ್ನು ಸಿಎಂ ಸಮ್ಮುಖದಲ್ಲಿ ಸ್ವೀಕರಿಸಲಾಯಿತು. ಸಮಾಜಿಕ ನ್ಯಾಯದತ್ತ ಬದ್ಧತೆ ಹೊಂದಿರುವ ಸರ್ಕಾರ, ನೀಡಿದ ಭರವಸೆ ಜಾರಿಗೆ ಹೆಜ್ಜೆ ಹಾಕುತ್ತಿದೆ ಎಂದಿದ್ದಾರೆ.
/newsfirstlive-kannada/media/media_files/2025/08/04/internal-reservation-4-2025-08-04-14-08-39.jpg)
ಸುಪ್ರೀಂ ಕೋರ್ಟ್ ಕಳೆದ ವರ್ಷ ಆಗಸ್ಟ್ 1 ರಂದು ನೀಡಿದ ತೀರ್ಪಿನಲ್ಲಿ ಸಂವಿಧಾನದ ಅಡಿ ರಾಜ್ಯ ಸರ್ಕಾರಗಳು ಶಿಕ್ಷಣ ಮತ್ತು ಸೇವೆಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ಪರಿಶಿಷ್ಟ ಜಾತಿಗಳ ಉಪವರ್ಗೀಕರಣಕ್ಕೆ ಅವಕಾಶ ಕಲ್ಪಿಸಿತ್ತು. ಅದರಂತೆ ರಾಜ್ಯ ಸರ್ಕಾರ ನ್ಯಾ.ಡಾ.ಎಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚಿಸಿತ್ತು. ಇಂದು ಆಯೋಗವು ಸಮೀಕ್ಷೆಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿದೆ.
/newsfirstlive-kannada/media/media_files/2025/08/04/internal-reservation-10-2025-08-04-14-09-05.jpg)
ವರದಿ ಸ್ವೀಕಾರದ ವೇಳೆ ಹಿರಿಯ ಸಚಿವರಾದ ಡಾ.ಜಿ ಪರಮೇಶ್ವರ್, ಕೆ.ಹೆಚ್ ಮುನಿಯಪ್ಪ, ಶಿವರಾಜ್ ತಂಗಡಗಿ, ಪ್ರಿಯಾಂಕ್ ಖರ್ಗೆ, ಆರ್.ಬಿ ತಿಮ್ಮಾಪುರ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.