/newsfirstlive-kannada/media/media_files/2025/11/07/kalaburagi-accident-2025-11-07-21-46-15.jpg)
ಕಲಬುರಗಿ: ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಜೀವಬಿಟ್ಟಿದ್ದಾರೆ. ಕಲಬುರಗಿ ತಾಲೂಕಿನ ಅವರಾದ (ಬಿ) ಗ್ರಾಮದ ಬಳಿ ದುರ್ಘಟನೆ ನಡೆದಿದೆ.
ಬೈಕ್ ಮತ್ತು ಕಾರಿಗೆ ಟ್ಯಾಂಕರ್ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಇಬ್ಬರು ಬೈಕ್ ಸವಾರರು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಭೀಕರ ರಸ್ತೆ ಅಪಘಾತದಿಂದ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಆಗಿದೆ.
ಘಟನಾ ಸ್ಥಳಕ್ಕೆ ಕಲಬುರಗಿ ಸಂಚಾರಿ ಠಾಣೆ 2 ಪೊಲೀಸರು ಭೇಟಿ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾಗಿರುವ ಅವ್ಯವಸ್ಥೆಯನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಇನ್ನು, ಅಪಘಾತ ಸಂಬಂಧ ಕೇಸ್ ದಾಖಲಿಸಿಕೊಂಡು ಮುಂದಿನ ಪ್ರಕ್ರಿಯೆ ಶುರು ಮಾಡಿದ್ದಾರೆ.
ಇದನ್ನೂ ಓದಿ: ಅಡ್ವೆಂಚರ್ ರೈಡ್ ಅಂತೂ ಅಲ್ಲವೇ ಅಲ್ಲ.. ಬೆಂಗಳೂರಿನ ಮಾನ ಹರಾಜು ಹಾಕಿದ ದೃಶ್ಯ ಇದು.. VIDEO
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us