/newsfirstlive-kannada/media/media_files/2025/11/01/kannada_book-2025-11-01-07-16-02.jpg)
ಬೆಂಗಳೂರು: ನಾಡಿನೆಲ್ಲೆಡೆ ಇಂದು ಸಂಭ್ರಮದ 70ನೇ ಕನ್ನಡ ರಾಜ್ಯೋತ್ಸವ. ಈ ಹಿನ್ನೆಲೆಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ಪುಸ್ತಕ ಪ್ರೇಮಿಗಳಿಗೆ, ಕನ್ನಡ ಆಸಕ್ತರಿಗೆ, ಜನರಿಗೆ ಶುಭಸುದ್ದಿ ನೀಡಿದೆ.
70ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ನವೆಂಬರ್​ ತಿಂಗಳು ಪೂರ್ತಿ ಪುಸ್ತಕಗಳ ಖರೀದಿ ಮೇಲೆ ಶೇಕಡಾ 50 ರಷ್ಟು ಆಫರ್​ ನೀಡಿದೆ. ಇಂದಿನಿಂದ ನವೆಂಬರ್​ 30ರವರೆಗೆ ಈ ರಿಯಾಯತಿ ಇರಲಿದೆ. ಹೀಗಾಗಿ ಪುಸ್ತಕಗಳನ್ನು ಖರೀದಿ ಮಾಡಬೇಕು ಎನ್ನುವವರಿಗೆ ಇದು ಒಳ್ಳೆಯ ಅವಕಾಶ ಎಂದೇ ಹೇಳಬಹುದು.
ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ 700ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಣೆ ಮಾಡಿದೆ. ಈ ಎಲ್ಲ ಪುಸ್ತಕಗಳನ್ನು ಜನರಿಗೆ ಕೈಗೆಟುಕುವ ಬೆಲೆಯಲ್ಲಿ ತಲುಪಿಸಬೇಕು ಎಂಬ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪುಸ್ತಕಗಳ ಮೇಲೆ ಶೇಕಡಾ 50 ರಷ್ಟು ರಿಯಾಯತಿ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ:ಕನ್ನಡದ ಹಬ್ಬ ‘ಕರ್ನಾಟಕ ರಾಜ್ಯೋತ್ಸವ’ ಮತ್ತು ಅದರ ಇತಿಹಾಸ..!
/filters:format(webp)/newsfirstlive-kannada/media/media_files/2025/11/01/kannada_books-2025-11-01-07-16-14.jpg)
ಶೇ.50 ರಷ್ಟು ರಿಯಾಯತಿ ಘೋಷಿಸಿದ ಪುಸ್ತಕಗಳು ಎಲ್ಲಿ ಸಿಗುತ್ತವೆ?
- ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆ
- ಎಲ್ಲ ಜಿಲ್ಲೆಗಳಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ
- ಪ್ರಾಧಿಕಾರದಿಂದ ತೆರೆಯಲಾದ ಎಲ್ಲ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳು
- ಪ್ರಾಧಿಕಾರದ ಜಾಲತಾಣದಲ್ಲಿಯೂ ಖರೀದಿ ಮಾಡಬಹುದು
ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕಗಳನ್ನು ಆನ್​ಲೈನ್​ನಲ್ಲಿಯೂ ಕೊಂಡುಕೊಳ್ಳಬಹುದು. ಇಲ್ಲಿಯೂ ಶೇ.50 ರಷ್ಟು ರಿಯಾಯತಿ ಇರುತ್ತದೆ ಎಂದು ಪ್ರಾಧಿಕಾರದ ರಿಜಿಸ್ಟ್ರಾರ್​ ಕು.ಮಿರ್ಜಿ ಅವರು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us