/newsfirstlive-kannada/media/media_files/2025/11/01/kannada_siddaramaiah-2025-11-01-14-28-48.jpg)
/newsfirstlive-kannada/media/media_files/2025/11/01/cm_siddaramaiah_dk-2025-11-01-11-03-13.jpg)
ಇಂದು 70 ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ತಾಯಿ ಭುವನೇಶ್ವರಿ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿದರು. ಇದಕ್ಕೂ ಕೆಲ ಕ್ಷಣಗಳು ಮುನ್ನಾ ಭುವನೇಶ್ವರಿ ಪ್ರತಿಮೆ ಬಳಿ ಸಿಎಂ ಆಗಮಿಸುತ್ತಿದಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಶುಭ ಕೋರಿದರು.
/newsfirstlive-kannada/media/media_files/2025/11/01/kannada_dk_shivakumar-2025-11-01-14-33-23.jpg)
ಕಂಠೀರವ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನ್ಯೂ ಲುಕ್ ಹೀಗಿತ್ತು.
/newsfirstlive-kannada/media/media_files/2025/11/01/kannada_mb_patil-2025-11-01-14-37-42.jpg)
ವಿಜಯಪುರ ಜಿಲ್ಲೆಯ ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯೋತ್ಸವ ಸಂಭ್ರಮಾಚರಣೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಪಿ ಪಾಟೀಲ್ ಅವರು ಕ್ಯಾಮೆರಾ ಕಣ್ಣಿಗೆ ಕಂಡರು.
/newsfirstlive-kannada/media/media_files/2025/11/01/kannada_eshwar_khandre-2025-11-01-14-40-02.jpg)
ಬೀದರ ನಗರದ ನೆಹರೂ ಸ್ಟೇಡಿಯಂನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು.
/newsfirstlive-kannada/media/media_files/2025/11/01/kannada_hdk-2025-11-01-14-44-20.jpg)
ಸಪ್ನ ಪುಸ್ತಕ ಮಳಿಗೆಯು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ಪುಸ್ತಕ ಜಾತ್ರೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಭಾಗಿಯಾಗಿದ್ದರು. ಕೇಂದ್ರ ಸಚಿವರ ಜೊತೆ ಇನ್ಫೋಸಿಸ್ನ ಸುಧಾಮೂರ್ತಿ, ಹಿರಿಯ ಸಾಹಿತಿ ಜಾಣಗೆರೆ ವೆಂಕಟರಾಮಯ್ಯ, ನಟ ಅನಿರುದ್ಧ ಜತಕರ, ನಟಿ ಕುಮಾರಿ ಅಂಕಿತ ಅಮರ್, ಸಪ್ನ ಪುಸ್ತಕ ಮಳಿಗೆಯ ನಿತಿನ್ ಶಾ, ದೊಡ್ಡೇಗೌಡ, ಸಾಹಿತಿಗಳಾದ ಡುಂಡಿರಾಜ್, ಎಂ.ಎಸ್ ನರಸಿಂಹಮೂರ್ತಿ, ವೈ.ವಿ. ಗುಂಡೂರಾವ್ ಅವರು ಸೇರಿ ಸಾಹಿತ್ಯಾಸಕ್ತರು ಇದ್ದರು.
/newsfirstlive-kannada/media/media_files/2025/11/01/kannada_satish_jarakiholi-2025-11-01-14-46-32.jpg)
ಬೆಳಗಾವಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಭವ್ಯವಾಗಿ ಆಯೋಜಿಸಲಾದ ೭೦ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಧ್ವಜಾರೋಹಣ ನೆರವೇರಿಸಿದರು.
/newsfirstlive-kannada/media/media_files/2025/11/01/kannada_yadagiri-2025-11-01-14-49-15.jpg)
ಇಂದು ಯಾದಗಿರಿ ನಗರದಲ್ಲಿ 70 ನೇ ಕನ್ನಡ ರಾಜ್ಯೋತ್ಸವ ನಿಮಿತ್ಯ ನಗರದ ಪ್ರಮುಖ ವೃತ್ತಗಳಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಧ್ವಜಾರೋಹಣ ಮಾಡಲಾಯಿತು.
/newsfirstlive-kannada/media/media_files/2025/11/01/kannada_byv-2025-11-01-14-52-39.jpg)
ಶಿಕಾರಿಪುರದಲ್ಲಿ ತಾಲೂಕು ಆಡಳಿತ ಹಾಗೂ ಕನ್ನಡ ಯುವಕ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ.
/newsfirstlive-kannada/media/media_files/2025/11/01/kannada_dks_cm-2025-11-01-14-54-03.jpg)
ಕಂಠೀರವ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ನೋಡುತ್ತಿರುವುದು.
/newsfirstlive-kannada/media/media_files/2025/11/01/kannada_khm-2025-11-01-14-57-04.jpg)
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ 70ನೇ ಕರ್ನಾಟಕ ರಾಜ್ಯೋತ್ಸವನ್ನು ಆಯೋಜಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ಚ ಮುನಿಯಪ್ಪ ಅವರು ಭಾಗಿಯಾಗಿದ್ದರು.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us