Advertisment

ಕನ್ನಡದ ಹಬ್ಬ ‘ಕರ್ನಾಟಕ ರಾಜ್ಯೋತ್ಸವ’ ಮತ್ತು ಅದರ ಇತಿಹಾಸ..!

ಇವತ್ತು ಕರುನಾಡಿನ ಹಬ್ಬ. ಅಂದರೆ ಕನ್ನಡ ರಾಜ್ಯೋತ್ಸವ. ಪ್ರತಿ ವರ್ಷದ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು (ಈಗಿನ ಕರ್ನಾಟಕ) 1956ರ ನವೆಂಬರ್ 1ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.

author-image
Ganesh Kerekuli
Kannada (2)
Advertisment

ಇವತ್ತು ಕರುನಾಡಿನ ಹಬ್ಬ. ಅಂದರೆ ಕನ್ನಡ ರಾಜ್ಯೋತ್ಸವ. ಪ್ರತಿ ವರ್ಷದ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು (ಈಗಿನ ಕರ್ನಾಟಕ) 1956ರ ನವೆಂಬರ್ 1ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.

Advertisment

ಇತಿಹಾಸ

ಕನ್ನಡದ ಕುಲಪುರೋಹಿತರಾದ ಆಲೂರು ವೆಂಕಟರಾಯರು, ಕರ್ನಾಟಕ ಏಕೀಕರಣ ಚಳವಳಿಯನ್ನು 1905 ರಲ್ಲಿ ಪ್ರಾರಂಭಿಸಿದರು. 1950ರಲ್ಲಿ ಭಾರತವು ಗಣರಾಜ್ಯವಾದ ನಂತರ ಭಾರತದ ವಿವಿಧ ಪ್ರಾಂತ್ಯಗಳು, ಭಾಷೆಗಳ ಆಧಾರದ ಮೇಲೆ ರಾಜ್ಯಗಳಾಗಿ ರೂಪ ಗೊಂಡವು. ಈ ಹಿಂದೆ ರಾಜರ ಆಳ್ವಿಕೆಯಲ್ಲಿ ದಕ್ಷಿಣ ಭಾರತದಲ್ಲಿ ಹಲವಾರು ಸಂಸ್ಥಾನಗಳನ್ನು ಒಳಗೊಂಡಂತೆ ರಾಜ್ಯಗಳು ರೂಪುಗೊಂಡಿದ್ದವು. ಕನ್ನಡ ಮಾತನಾಡುವ ಪ್ರಾಂತ್ಯಗಳು ಸೇರಿ, ಮೈಸೂರು ರಾಜ್ಯವು ಉದಯವಾಯಿತು.

kannada rajyosatva awards

1956ರ ನವೆಂಬರ್ 1 ರಂದು, ಮದ್ರಾಸ್, ಮುಂಬೈ, ಹೈದರಾಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು ಹಾಗೂ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೆಯ ಮೈಸೂರು ಎಂಬುದಾಗಿ ಹೊಸದಾಗಿ ರೂಪು ಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು.

ಹೊಸದಾಗಿ ಏಕೀಕೃತಗೊಂಡ ರಾಜ್ಯದ ಆರಂಭದಲ್ಲಿ ಹೊಸ ಘಟಕದ ಕೋರ್ ರೂಪುಗೊಂಡು ಮುಂಚಿನ ರಾಜ್ಯದ ಹೆಸರು ಇರಲೆಂದು ‘ಮೈಸೂರು’ ಹೆಸರನ್ನು ಉಳಿಸಿಕೊಂಡರು. ಆದರೆ ಉತ್ತರ ಕರ್ನಾಟಕದ ಜನರ ತರ್ಕ ಮಾನ್ಯತೆಗಾಗಿ, ರಾಜ್ಯದ ಹೆಸರು ನವೆಂಬರ್ 1, 1973 ರಂದು ‘ಕರ್ನಾಟಕ’ ಎಂದು ಬದಲಾಯಿತು.

Advertisment

ಈ ಸಂದರ್ಭದಲ್ಲಿ ದೇವರಾಜ ಅರಸ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಕರ್ನಾಟಕ ಏಕೀಕರಣದ ಮನ್ನಣೆ ಇತರ ವ್ಯಕ್ತಿಗಳಿಗೂ ಸೇರುತ್ತದೆ. ಅವರೆಂದರೆ ಅನಕೃ, ಕೆ. ಶಿವರಾಮ ಕಾರಂತ, ಕುವೆಂಪು, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಎ.ಎನ್.ಕೃಷ್ಣರಾವ್ ಮತ್ತು ಬಿ.ಎಂ.ಶ್ರೀಕಂಠಯ್ಯ

ವಿಧಾನಸೌಧ ಆವರಣದಲ್ಲಿ ತಾಯಿ ಭುವನೇಶ್ವರಿ ಪುತ್ಥಳಿ ಅನಾವರಣ; ಲೋಕಾರ್ಪಣೆ ಮಾಡಿದ ಸಿಎಂ ಹೇಳಿದ್ದೇನು?

ಭಾರತ ಸ್ವಾತಂತ್ರ್ಯಗೊಂಡ ನಂತರ ಕನ್ನಡ ಭಾಷಿಕರಿರುವ ವಿವಿಧ ಪ್ರದೇಶಗಳನ್ನು ಒಂದುಗೂಡಿಸಿ ಮೈಸೂರು ರಾಜ್ಯವನ್ನು ರಚಿಸಲಾಗಿತ್ತು. ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಪ್ರದೇಶಗಳು ಈ ರಾಜ್ಯದಲ್ಲಿ ವಿಲೀನವಾಗಿದ್ದವು. ಈ ಪ್ರದೇಶದ ಜನರಿಗೆ ರಾಜ್ಯಕ್ಕೆ ಮೈಸೂರು ರಾಜ್ಯʼ ಎಂದು ನಾಮಕರಣ ಮಾಡಿರುವುದು ಇಷ್ಟವಾಗಿರಲಿಲ್ಲ. ಈ ಹೆಸರಲ್ಲಿ ಬದಲಾವಣೆ ಮಾಡಬೇಕೆಂದು ಒತ್ತಾಯಿಸುತ್ತಿದ್ದರು.

ಈ ಕುರಿತು ಆಗ ರಾಜ್ಯದಲ್ಲಿ ಸುದೀರ್ಘ ಚರ್ಚೆಯ ಬಳಿಕ 1973ರ ನವೆಂಬರ್ 1ರಂದು ರಾಜ್ಯಕ್ಕೆ ‘ಕರ್ನಾಟಕ’ವೆಂದು ಪುನರ್ ನಾಮಕರಣ ಮಾಡಲಾಯಿತು. ಆಗಿನ ಮುಖ್ಯಮಂತ್ರಿಯಾಗಿದ್ದ ದೇವರಾಜ್ ಅರಸು ಅವರು ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದರು.

Advertisment

ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂದು ನಾಮಕರಣ ಮಾಡಿದ ಶುಭದಿನದಂದು ರಾಜ್ಯವನ್ನು ಉದ್ದೇಶಿಸಿದ ಮಾತನಾಡಿದ ಅರಸರು ಈ ಬೆಳವಣಿಗೆಯನ್ನು ಹೀಗೆ ವಿವರಿಸಿದ್ದರು. ಕರ್ನಾಟಕದ ಏಕೀಕರಣದ ಹಂಬಲಕ್ಕೆ ಸ್ಫುಟವಾದ ರೂಪು ದೊರೆಕಿದ್ದು 1916ರಲ್ಲೇ. ಧಾರವಾಡದಲ್ಲಿ ಕರ್ನಾಟಕ ಸಭೆ ಸ್ಥಾಪನೆಯಾದಾಗ, ಏಕೀಕರಣ ಸಮ್ಮೇಳನವು ಧಾರವಾಡದಲ್ಲಿ ಮೊಟ್ಟ ಮೊದಲಿಗೆ ನಡೆಯಿತು. 1920ರಲ್ಲಿ ನಾಗಪುರ ಕಾಂಗ್ರೆಸ್ಸಿನ ಅಧಿವೇಶನದಲ್ಲಿ ಭಾಷಾವಾರು ಪ್ರಾಂತ್ಯರಚನೆ ಸ್ಪಷ್ಟವಾದ ರೂಪುರೇಷೆ ಪಡೆಯಿತು. ಆದರೆ ಕನ್ನಡಿಗರ ಕನಸು ನನಸಾಗಲು ಮುವತ್ತಾರು ವರ್ಷಗಳೇ ಬೇಕಾಯಿತು.

Kannada

1956ರ ನವೆಂಬರ್ ಒಂದರಂದು ಕನ್ನಡನಾಡು ಉದಯಿಸಿತು. ಈ ನಾಡಿನ ಹಿರಿಮೆ, ಸಂಸ್ಕೃತಿ ಮತ್ತು ಒಗ್ಗಟ್ಟಿನ ಸಂಕೇತವಾದ ಹೆಸರು ಇರದೇ ಇದ್ದುದು ಜನಮನದ ಅಂತರಾಳವನ್ನು ಕಲಕಿತ್ತು. ಮತ್ತೆ 17 ವರ್ಷಗಳ ನಂತರ ಕಾಲಮಾನ ಪರಿಸ್ಥಿತಿಗೆ ಅನುಗುಣವಾಗಿ ನಡೆದ ಪ್ರಾಮಾಣಿಕ ಪ್ರಯತ್ನದ ಫಲವಾಗಿ ಈಗ ಜನತೆಯ ಮಹತ್ವಾಕಾಂಕ್ಷೆ ಈಡೇರಿದೆ. ಹಲವಾರು ದಶಕಗಳ ಕಾಲ ನಾಡು-ನುಡಿಯ ಉತ್ಕಟ ಪ್ರೇಮಿಗಳ ತ್ಯಾಗ ಶ್ರಮದ ಸಾಕ್ಷಾತ್ಕಾರ ಈ ನಾಮಕರಣ. ಆ ಪ್ರಾತಃಸ್ಮರಣೀಯರಿಗೆಲ್ಲ ರಾಜ್ಯದ ಜನತೆಯ ಪರವಾಗಿ ಕೃತಜ್ಞತೆಗಳು ಎಂದು ಹೇಳಿದ್ದರು.

Kannada (1)

ರಾಜ್ಯದ ಹೆಸರನ್ನು ‘ಕರ್ನಾಟಕ’ ಎಂದು ಮಾರ್ಪಡಿಸುವ ಕುರಿತು ಸರ್ಕಾರದ ತೀರ್ಮಾನವನ್ನು ವಿಧಾನಸಭೆಯಲ್ಲಿ ಸ್ವತಃ ಮುಖ್ಯಮಂತ್ರಿ ದೇವರಾಜ ಅರಸು ಅವರೇ ಮಂಡಿಸಿದ್ದರು. ಆ ದಿನವನ್ನು ಅವರು ಇತಿಹಾಸದಲ್ಲಿ ಒಂದು ಹೊಸ ಅಧ್ಯಾಯದ ದಿವಸ ಎಂದು ಬಣ್ಣಿಸಿದ್ದರಲ್ಲದೆ, ‘ಕರ್ನಾಟಕ’ ಎನ್ನುವ ಹೆಸರನ್ನು ಹಿಂದೆ ರಾಜ್ಯ ಗುರುಗಳು ಉಪಯೋಗಿಸುತ್ತಿದ್ದರು. ಕರ್ನಾಟಕ ಸಿಂಹಾಸನಾಧೀಶ್ವರ ಎಂದು ಒಂದು ಕಾಲದಲ್ಲಿ ಮೈಸೂರು ರಾಜರು ಹೆಸರು ಇಟ್ಟುಕೊಂಡಿದ್ದರು. ಹೊಯ್ಸಳರು, ಕದಂಬರರೂ ಇಟ್ಟುಕೊಂಡಿದ್ದರು. ಹೀಗೆ ಒಂದಲ್ಲ ಒಂದು ರೀತಿಯಲ್ಲಿ ಈ ಹೆಸರು ಬರುತ್ತಲೇ ಇತ್ತು. ಸಾಹಿತಿಗಳು ಸಾಹಿತ್ಯದಲ್ಲಿ ‘ಕರ್ನಾಟಕ’ ಎಂಬ ಹೆಸರನ್ನು ಇಡಬಹುದು ಎಂದು ಹೇಳಿದ್ದಾರೆ. ಅದರಂತೆ ಇಲ್ಲಿ ನಿರ್ಣಯವನ್ನು ಮಂಡಿಸಿದ್ದೇನೆ ಎಂದು ವಿವರಣೆಯನ್ನೂ ನೀಡಿದ್ದರು.

Advertisment

(ಮಾಹಿತಿ ವಿಕಿಪಿಡಿಯಾ)

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

karnataka rajyotsava ಕನ್ನಡ, Kannada ಕನ್ನಡ ರಾಜ್ಯೋತ್ಸವ
Advertisment
Advertisment
Advertisment