/newsfirstlive-kannada/media/media_files/2025/09/17/bpl-card-2025-09-17-11-10-27.jpg)
ಬೆಂಗಳೂರು: ಯಾವುದೇ ಅನರ್ಹ ಬಿಪಿಎಲ್ ಕಾರ್ಡ್ಗಳನ್ನ (BPL card) ರದ್ದು ಮಾಡುವುದಿಲ್ಲ. ಆದರೆ ಅಂತಹ ಕಾರ್ಡ್‌ಗಳನ್ನು ಎಪಿಎಲ್ ಆಗಿ ಕನ್ವರ್ಟ್ ಮಾಡ್ತೀವಿ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ (KH Muniyappa) ಹೇಳಿದ್ದಾರೆ.
ಬೆಂಗಳೂರಿನಲ್ಲಿ ಅನರ್ಹ ರೇಷನ್ ಕಾರ್ಡ್‌ಗಳ ರದ್ದು ವಿಚಾರವಾಗಿ ಮಾತನಾಡಿರುವ ಮುನಿಯಪ್ಪ.. ಬಿಪಿಎಲ್‌ನಲ್ಲಿರುವ ಅನರ್ಹರನ್ನು ನಿಯಮಗಳ ಪ್ರಕಾರ ಪರಿಷ್ಕರಣೆ ಮಾಡಿ. ಎಪಿಎಲ್‌ಗೆ ವರ್ಗಾವಣೆ ಮಾಡುತ್ತೇವೆ. ಯಾವ ಕಾರ್ಡನ್ನೂ ರದ್ದು ಮಾಡಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ:‘ಆನೆ ಮೇಲಿನ ಅಂಬಾರಿ..’ ನಟಿ ಮಯೂರಿ ಈಗ ಏನ್ಮಾಡ್ತಿದ್ದಾರೆ..? Photos
ಜೊತೆಗೆ ಎಲ್ಲಾ ಕಾರ್ಡ್‌ಗಳನ್ನು ಪರಿಷ್ಕರಣೆ ಮಾಡುತ್ತೇವೆ. ವರ್ಗಾವಣೆ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆಯಾದರೆ 24 ಗಂಟೆಯೊಳಗೆ ಅದನ್ನು ಸರಿಪಡಿಸಿ ಆಹಾರ ಧಾನ್ಯ ಕೊಡುವ ಕೆಲಸ ಮಾಡ್ತೇವೆ ಎಂದಿದ್ದಾರೆ. ಇನ್ನು, ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ಗಳ ಲಿಸ್ಟ್ ನ್ಯಾಯಬೆಲೆ ಅಂಗಡಿಗಳ ಮುಂದೆ ಪ್ರತ್ಯಕ್ಷವಾಗಿದೆ. ಲಿಸ್ಟ್ನಲ್ಲಿ ಇರುವವರಿಗೆ ಮೂರು ದಿನಗಳವರೆಗೆ ಪಡಿತರ ವಿತರಣೆಯನ್ನು ತಡೆಹಿಡಿಯಲು ಮೌಖಿಕ ಆದೇಶ ಹೊರಡಿಸಲಾಗಿದೆ.
ವಾರ್ಷಿಕ ಆದಾಯ ₹1,20,000 ಇರುವವರ ಬಿಪಿಎಲ್ ಕಾರ್ಡ್ ರದ್ದುಪಡಿಸಲಾಗುತ್ತಿರುವ ಹಿನ್ನಲೆ, ಕೆಲವಡೆ ಆಕ್ರೋಶ ವ್ಯಕ್ತವಾಗಿದೆ. ಇನ್ನೂ ಕೆಲವು ಕಡೆ ಗೊಂದಲದ ವಾತಾವರಣ ನಿರ್ಮಾಣವಾಗಿದೆ.
ಇದನ್ನೂ ಓದಿ:4 ವರ್ಷ ಪ್ರೀತಿ, ಮದುವೆ, 11 ತಿಂಗಳ ಮಗು ಬೇರೆ ಇತ್ತು.. ಅದೊಂದು ಕಾರಣಕ್ಕೆ ಜೀವಬಿಟ್ಟ ಗೃಹಿಣಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ