/newsfirstlive-kannada/media/media_files/2025/08/17/ckm_rains-1-2025-08-17-23-15-06.jpg)
ಕೊಡಗು: ನಾಳೆ ಅಂದರೆ ಆಗಸ್ಟ್ 18 ರಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೆಲ ಜಿಲ್ಲೆಗಳಲ್ಲಿ ಈಗಲೂ ಧಾರಾಕಾರವಾದ ಮಳೆ ಮುಂದುವರೆದಿದೆ. ಮಕ್ಕಳ ಸುರಕ್ಷತಾ ದೃಷ್ಟಿಯಿಂದ ರಜೆ ಘೋಷಣೆ ಮಾಡಲಾದ ಜಿಲ್ಲೆ, ತಾಲೂಕಿನ ವಿವರ ಈ ಕಳಕಂಡಂತೆ ಇದೆ, ಗಮನಿಸಿ.
ಈಗಾಗಲೇ ಕೊಡಗಿನಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಾದ್ಯಾಂತ ಧಾರಾಕಾರ ಮಳೆ ಬರುವ ಸೂಚನೆ ಹಿನ್ನೆಲೆಯಲ್ಲಿ ನಾಳೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ವೆಂಕಟರಾಜ ಅವರು ಶಾಲೆಗಳಿಗೆ ರಜೆ ಅನೌನ್ಸ್ ಮಾಡಿದ್ದಾರೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ವರುಣಾರ್ಭಟ ಮುಂದುವರೆದ ಕಾರಣ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪಿಯು ಮತ್ತು ಪದವಿ ಕಾಲೇಜಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಆಗಿದೆ. ಹಾಗಾಗಿ ಡಿಸಿ ಗುರುದತ್ ಹೆಗಡೆ ಅವರು ನಾಳೆ ಒಂದು ದಿನ ಮಾತ್ರ ರಜೆ ಘೋಷಿಸಿದ್ದಾರೆ. ಯಾವುದೇ ಹಾನಿಯಾಗಬಾರದು ಎಂದು ರಜೆ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ದಾಂಡೇಲಿ ಸೇರಿ ಒಟ್ಟು 10 ತಾಲೂಕಿನ ಶಾಲೆಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ರಜೆ ನೀಡಿದ್ದಾರೆ. ನಾಳೆ ನಾಡಿದ್ದು ಎರಡು ದಿನ ವರುಣಾರ್ಭಟ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಆಗಿದೆ. ಈ ಎಚ್ಚರಿಕೆ ಬೆನ್ನಲ್ಲೇ ಮಕ್ಕಳ ಸುರಕ್ಷತೆಗಾಗಿ ರಜೆ ಕೊಡಲಾಗಿದೆ.
ಇದನ್ನೂ ಓದಿ: ಹೆಂಡತಿ ಜೀವ ತೆಗೆದು ಓಡಿ ಹೋಗ್ತಿದ್ದ ಪಾಪಿ ಪಾಪಣ್ಣ.. ತಂದೆನ ಹಿಡಿದುಕೊಟ್ಟ ಮಗ
ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಸಕಲೇಶಪುರ, ಬೇಲೂರು, ಆಲೂರು ತಾಲೂಕಿನ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ ಆಗಿದೆ. ಅಂಗನವಾಡಿ, ಪ್ರಾಥಮಿಕ ,ಪ್ರೌಢ ಶಾಲೆಗಳಿಗೆ ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಅವರು ರಜೆ ನೀಡಿರುವ ಬಗ್ಗೆ ಆದೇಶ ಹೊರಡಿಸಿದ್ದಾರೆ.
ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಮಕ್ಕಳ ಸುರಕ್ಷತೆ ಕಾರಣ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ಒಂದು ದಿನ (ಆ.18) ಮಾತ್ರ ರಜೆ ಘೋಷಣೆ ಮಾಡಿದ್ದಾರೆ. ಏಕೆಂದರೆ ಕಾಫಿನಾಡು ಮಲೆನಾಡು ಭಾಗದಲ್ಲಿ ಭಾರೀ ಗಾಳಿ, ಮಳೆ ಈಗಲೂ ಮುಂದುವರೆದಿದೆ. ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್.ಆರ್ ಪುರ, ಕಳಸ ತಾಲೂಕಿನಲ್ಲಿ ರಜೆ ನೀಡಲಾಗಿದೆ. ಇದರ ಜೊತೆಗೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು, ವಸ್ತಾರೆ, ಖಾಂಡ್ಯ, ಆವತಿ, ಜಾಗರ ಹೋಬಳಿಗಳ ಶಾಲೆಗಳಿಗೂ ರಜೆ ಇರುತ್ತದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ