/newsfirstlive-kannada/media/media_files/2025/11/07/kodagu_vinodh-1-2025-11-07-17-48-43.jpg)
ಕೊಡಗು: ಚಿಕಿತ್ಸೆಗೆಂದು ಖಾಸಗಿ ಕ್ಲಿನಿಕ್​​ಗೆ ತೆರಳಿದ್ದ ಯುವಕ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಪೋಷಕರು ಆಸ್ಪತ್ರೆಯ ವೈದ್ಯರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ವಿನೋದ್ (34) ಮೃತ ದುರ್ದೈವಿ.
ಮೃತ ವಿನೋದ್​ ಸುಂಟಿಕೊಪ್ಪದ ನಿವಾಸಿಯಾಗಿದ್ದ. ಸೊಂಟ ನೋವು ಹಾಗೂ ಅನಾರೋಗ್ಯ ಹಿನ್ನೆಲೆಯಲ್ಲಿ ಸುಂಟಿಕೊಪ್ಪ ಪಟ್ಟಣದಲ್ಲಿರುವ ಉಮಾ ಕ್ಲಿನಿಕ್​ಗೆ ತೆರಳಿದ್ದ. ಈ ವೇಳೆ ವೈದ್ಯೆ ಯಶೋಧರ ಪೂಜಾರಿ ಚಿಕಿತ್ಸೆ ನೀಡಿದ್ದರು. ಚಿಕಿತ್ಸೆ ಪಡೆದು ಮನೆಗೆ ಬಂದ ನಂತರ ವಿನೋದ್ ತೀವ್ರ ಅಸ್ವಸ್ಥಗೊಂಡಿದ್ದಾನೆ. ಕೆಲವೇ ಹೊತ್ತಿನಲ್ಲಿ ಆತ ಮೃತಪಟ್ಟಿದ್ದಾನೆ.
ಪೋಷಕರಿಂದ ಗಂಭೀರ ಆರೋಪ..
ವಿನೋದ್ ಪೋಷಕರು ಮಗನ ಸಾವಿಗೆ ವೈದ್ಯರೇ ಕಾರಣ ಎಂದು ಆರೋಪಿಸಿದ್ದಾರೆ. ಚಿಕಿತ್ಸೆಗೆ ತೆರಳಿದ್ದ ವೇಳೆ ಎರಡು ಬಾರಿ ವಿನೋದ್​​ಗೆ ಇಂಜೆಕ್ಷನ್ ನೀಡಿದ್ದರು. ಇದರಿಂದ ಆತ ತೀವ್ರ ಅಸ್ವಸ್ಥಗೊಂಡಿದ್ದ. ವೈದ್ಯರ ಯಡವಟ್ಟಿನಿಂದ ಮೃತಪಟ್ಟಿದ್ದಾನೆ ಎಂದು ಕಣ್ಣೀರು ಇಟ್ಟಿದ್ದಾರೆ.
ಹೆದ್ದಾರಿ ತಡೆದು ಪ್ರತಿಭಟನೆ
ವಿನೋದ್ ನಿಧನಕ್ಕೆ ಸಂಬಂಧಿಕರು, ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೀವ ತೆಗೆದ ಆಸ್ಪತ್ರೆಯು ಸಂತ್ರಸ್ತ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಮಾತ್ರವಲ್ಲದೇ ರಾಷ್ಟ್ರೀಯ ಹೆದ್ದಾರಿ 275 ಬಂದ್ ಮಾಡಿ ಎಚ್ಚರಿಕೆ ನೀಡಿದ್ದಾರೆ. ಸುಂಟಿಕೊಪ್ಪ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ: ಎನ್ ಕೌಂಟರ್ ಸ್ಪೆಷಲಿಸ್ಟ್ ಎಂಬುದೇ ಬಂಡವಾಳ, ಜನರನ್ನು ಬೆದರಿಸಿ ಗಳಿಸಿದ್ದು 92 ಕೋಟಿ ರೂ.! ಯುಪಿ ಡಿವೈಎಸ್ಪಿ ಶುಕ್ಲಾ ಕರಾಮತ್ತು!
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us