/newsfirstlive-kannada/media/media_files/2026/03/04/koppal-2026-03-04-20-00-30.jpg)
ಕೊಪ್ಪಳ/ಗಂಗಾವತಿ: ಬಣ್ಣದ ಹಬ್ಬ ಹೋಳಿ ಹುಣ್ಣಿಮೆಯ (Holi Festival) ಸಂಭ್ರಮದಲ್ಲಿದ್ದ ಕುಟುಂಬಗಳಲ್ಲಿ ಇದೀಗ ಸೂತಕದ ಛಾಯೆ ಆವರಿಸಿದೆ. ಅದ್ದೂರಿಯಾಗಿ ಬಣ್ಣದೋಕುಳಿ ಆಡಿ, ಮೈಮೇಲಿನ ಬಣ್ಣ ತೊಳೆಯಲು ಕೆರೆಗೆ ಸ್ನಾನಕ್ಕೆಂದು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿರುವ (Drowned) ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಬುಧವಾರ ನಡೆದಿದೆ.
ನೀರುಪಾಲಾದ ದುರ್ದೈವಿಗಳನ್ನು ಗಂಗಾವತಿ ನಗರದ ಗಾಂಧಿನಗರ ನಿವಾಸಿಗಳಾದ ಅಭಿಷೇಕ್ ಮತ್ತು ಸೂರ್ಯ ಎಂದು ಗುರುತಿಸಲಾಗಿದೆ. ಗಂಗಾವತಿ ತಾಲೂಕಿನ ಸಣಾಪೂರ ಗ್ರಾಮದ ಕೆರೆಯಲ್ಲಿ (Sanapur Lake) ಈ ದುರಂತ ಸಂಭವಿಸಿದೆ.
ನಡೆದಿದ್ದೇನು?
ಬುಧವಾರ ಬೆಳಗ್ಗೆ ಸ್ನೇಹಿತರೊಂದಿಗೆ ಸೇರಿ ಅಭಿಷೇಕ್ ಹಾಗೂ ಸೂರ್ಯ ಸಖತ್ ಆಗಿ ಹೋಳಿ ಆಡಿದ್ದರು. ಹಬ್ಬದ ಸಂಭ್ರಮ ಮುಗಿದ ಬಳಿಕ ಮೈಗೆ ಅಂಟಿದ್ದ ಬಣ್ಣವನ್ನು ತೊಳೆಯುವ ಉದ್ದೇಶದಿಂದ ಸಣಾಪೂರ ಕೆರೆಗೆ ಬಂದಿದ್ದಾರೆ. ಕೆರೆಯಲ್ಲಿ ಸ್ನಾನ ಮಾಡಲು ನೀರಿಗಿಳಿದ ವೇಳೆ, ನೀರಿನ ಆಳದ ಅರಿವಿಲ್ಲದೆ ಇಬ್ಬರೂ ಮುಳುಗಿದ್ದಾರೆ ಎನ್ನಲಾಗಿದೆ. ಯುವಕರು ನೀರಿನಲ್ಲಿ ಒದ್ದಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ರಕ್ಷಣೆಗೆ ಧಾವಿಸಿದರೂ ಅಷ್ಟರಲ್ಲಾಗಲೇ ಇಬ್ಬರೂ ನೀರುಪಾಲಾಗಿದ್ದಾರೆ.
ಇದನ್ನೂ ಓದಿ:ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ.. CM ಸ್ಥಾನ ತೊರೆಯಲು ಮುಂದಾದ ನಿತೀಶ್ ಕುಮಾರ್?
ಮುಂದುವರಿದ ಶೋಧ ಕಾರ್ಯಾಚರಣೆ
ಘಟನೆಯ ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ (Fire Brigade) ಹಾಗೂ ಪೊಲೀಸರು, ಸ್ಥಳೀಯ ಈಜುಗಾರರ ನೆರವಿನೊಂದಿಗೆ ಕೆರೆಯಲ್ಲಿ ಯುವಕರಿಗಾಗಿ ತೀವ್ರ ಶೋಧ ಕಾರ್ಯಾಚರಣೆ (Search Operation) ನಡೆಸುತ್ತಿದ್ದಾರೆ. ಕೆರೆಯಲ್ಲಿ ನೀರು ಹೆಚ್ಚಿರುವುದರಿಂದ ಶೋಧ ಕಾರ್ಯಕ್ಕೆ ಕೊಂಚ ಅಡ್ಡಿಯಾಗಿದೆ ಎಂದು ತಿಳಿದುಬಂದಿದೆ.
ಈ ಘಟನೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ (Gangavathi Rural Police Station) ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಹಬ್ಬದ ದಿನವೇ ಇಬ್ಬರು ಯುವಕರು ನೀರುಪಾಲಾಗಿರುವುದು ಗಾಂಧಿನಗರ ಪ್ರದೇಶದಲ್ಲಿ ತೀವ್ರ ಶೋಕ ಮಡುಗಟ್ಟುವಂತೆ ಮಾಡಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ:ಶ್ರೀಲಂಕಾದಲ್ಲಿನ ಇರಾನ್ ಯುದ್ಧನೌಕೆ ಮೇಲೆ US ಸಬ್‌ಮರೀನ್ ದಾಳಿ: 80 ಸಾವು, 100ಕ್ಕೂ ಹೆಚ್ಚು ಮಂದಿ ನಾಪತ್ತೆ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us