/newsfirstlive-kannada/media/media_files/2025/09/21/basavajaya_mruthyunjaya_swamiji-2025-09-21-17-46-35.jpg)
ಬಾಗಲಕೋಟೆ: ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಕೂಡಲಸಂಗಮ ಪಂಚಮಸಾಲಿ ಪೀಠದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಟ್ರಸ್ಟ್ ಅಧ್ಯಕ್ಷರು ಹಾಗೂ ಸದಸ್ಯರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಹುನಗುಂದ ತಾಲೂಕಿನ ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿದೆ. ಪಂಚಮಸಾಲಿ ಪೀಠದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಅಧ್ಯಕ್ಷರು ಹಾಗೂ ಸದಸ್ಯರು ಸೇರಿ ಈ ತೀರ್ಮಾನವನ್ನು ಮಾಡಿದ್ದಾರೆ. ಕೂಡಲಸಂಗಮ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ಕಾರ್ಯದರ್ಶಿ ನೀಲಕಂಠ ಅಸೂಟಿ ಸೇರಿದಂತೆ ಟ್ರಸ್ಟ್ ಸದಸ್ಯರಿಂದ ನಿರ್ಣಯ ಕೈಗೊಳ್ಳಲಾಗಿದೆ. ಈ ಬಗ್ಗೆ ನೀಲಕಂಠ ಅಸೂಟಿ ಅವರು ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ:ಗಣಪತಿ ವಿಗ್ರಹಕ್ಕೆ ಚಪ್ಪಲಿ ಹಾರ ಘಟನೆ.. ದೇವಸ್ಥಾನದ ಅಧ್ಯಕ್ಷರಿಂದ ದೂರು ದಾಖಲು
ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಆಗಿದ್ದಾಗ ಬಸವಜಯಮೃತ್ಯುಂಜಯ ಸ್ವಾಮೀಜಿ ಅವರು ದಾವಣಗೆರೆ ಹಾಗೂ ಇತರೆ ಕಡೆ ಸ್ವ ಆಸ್ತಿ ಮಾಡಿದ್ದಾರೆ. ಲಿಂಗಾಯತ ತತ್ವ ಬಿಟ್ಟು ಹಿಂದುತ್ವ ಪರ ಅವರು ಹೊರಟಿದ್ದಾರೆ. ಟ್ರಸ್ಟ್ ಸದಸ್ಯರ ಮಾತುಗಳನ್ನು ಕೇಳುವುದೇ ಇಲ್ಲ. ಜೊತೆಗೆ ಪೀಠದಲ್ಲಿ ಇರೋದಿಲ್ಲ. ಸ್ವಾಮೀಜಿಯಾಗಿ ಅವರು ಒಂದು ಪಕ್ಷದ ಪರ ಹೋಗುತ್ತಿದ್ದಾರೆ. ಸ್ವಾಮೀಜಿಗಳು ಸ್ವಾಮೀಜಿಗಳಾಗಿ ಉಳಿದಿಲ್ಲ. ಈ ಎಲ್ಲ ಕಾರಣ ಸೇರಿದಂತೆ ಇನ್ನು ಅನೇಕ ಕಾರಣ ನೀಡಿ ಅವರನ್ನು ಉಚ್ಚಾಟನೆ ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ