/newsfirstlive-kannada/media/media_files/2025/12/16/karnataka-lokayukuta-2025-12-16-18-08-47.jpg)
ಲೋಕಾಯುಕ್ತ ಪೊಲೀಸರಿಂದ ನಾಲ್ಕು ಜಿಲ್ಲೆಗಳಲ್ಲಿ ದಾಳಿ, ಶೋಧ
ರಾಜ್ಯದಲ್ಲಿ ಇಂದು ಬೆಳ್ಳಂಬೆಳಗ್ಗೆ ನಾಲ್ಕು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿಯಾಗಿದೆ. ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಅಧಿಕಾರಿಗಳು, ಆದಾಯ ಮೀರಿದ ಆಸ್ತಿ ಗಳಿಕೆ ಮಾಡಿದ ಅಧಿಕಾರಿಗಳ ಮೇಲೆ ನಿಖರ ಮಾಹಿತಿ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬಾಗಲಕೋಟೆ, ವಿಜಯಪುರ, ಕಾರವಾರ, ರಾಯಚೂರು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿಯಾಗಿದೆ.
ಬಾಗಲಕೋಟೆ ಜಿಲ್ಲಾ ಪಂಚಾಯ್ತಿ ಅಸಿಸ್ಟೆಂಟ್ ಸೆಕ್ರೆಟರಿ ಶ್ಯಾಂ ಸುಂದರ್ ಕಾಂಬ್ಳೆ, ವಿಜಯಪುರ ಜಿಲ್ಲೆ ಬಾಗೇವಾಡಿಯ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಪ್ಪ ಮನೆ, ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಕಾರವಾರ ಜಿಲ್ಲೆ ಸಿದ್ದಾಪುರ ಕೋಲಾ ಶಿರಸಿ ಗ್ರಾಮ ಸೇವಾ ಸಹಕಾರಿ ಸಂಘದ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಮಾರುತಿ ಯಶವಂತ ಮಾಳವಿ, ರಾಯಚೂರು ಜಿಲ್ಲೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಸಹಾಯಕ ಎಂಜಿನಿಯರ್ ವಿಜಯಲಕ್ಷ್ಮಿ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಂದು ಸಂಜೆ ವೇಳೆಗೆ ದಾಳಿಯ ವೇಳೆ ಎಷ್ಟು ಪ್ರಮಾಣದ ಆಕ್ರಮ ಆಸ್ತಿಪಾಸ್ತಿ ಪತ್ತೆಯಾಯಿತು ಎಂಬ ಮಾಹಿತಿ ಲಭ್ಯವಾಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us