/newsfirstlive-kannada/media/media_files/2025/09/16/radhika_dinesh-2025-09-16-15-26-27.jpg)
ಸಚಿವ ಜಮೀರ್, ರಾಧಿಕಾ, ದಿನೇಶ್ ಗುಂಡೂರಾವ್
ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಇದೀಗ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ.
ಕಾಂಗ್ರೆಸ್ ಸಚಿವರಾದ ಜಮೀರ್ ಅಹ್ಮದ್ ಖಾನ್ ಹಾಗೂ ದಿನೇಶ್ ಗುಂಡೂರಾವ್ ನಡುವೆ ಹಣಕಾಸಿನ ವಹಿವಾಟು ನಡೆದಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೊಟ್ಟಿದ್ದಾರೆ. ನೋಟಿಸ್ ಜಾರಿ ಮಾಡಿದ ಮೇಲೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡುವಂತೆ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿಕೊಂಡಿದ್ದಾರೆ.
/filters:format(webp)/newsfirstlive-kannada/media/media_files/2025/08/01/dinesh-gundurao-2025-08-01-09-57-03.jpg)
ಸಚಿವ ಜಮೀರ್ ಅಹ್ಮದ್ ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಈ ಮೊದಲು ಕೆಜಿಎಫ್ ಬಾಬು, ರಾಧಿಕಾ ಕುಮಾರಸ್ವಾಮಿ ಅವರಿಗೆ ನೋಟಿಸ್ ನೀಡಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ರಾಧಿಕಾ ಕುಮಾರಸ್ವಾಮಿ ವಿಚಾರಣೆಗೆ ಹಾಜರಾಗಿದ್ದರು. ಸಿನಿಮಾ ನಿರ್ಮಾಣದಿಂದ ಬಂದ ಹಣವನ್ನು ಜಮೀರ್ ಅಹ್ಮದ್ ಖಾನ್ ಅವರಿಗೆ ನೆರವು ನೀಡಲಾಗಿತ್ತು. ಅವರಿಗೆ 2 ಕೋಟಿ ಹಣ ನೀಡಿದ ಬಗ್ಗೆ ಸೂಕ್ತ ದಾಖಲೆ ಒದಗಿಸಲು ಸೂಚನೆ ನೀಡಲಾಗಿತ್ತು. ಈ ವೇಳೆ ಹಣಕಾಸು ವ್ಯವಹಾರದ ಬಗ್ಗೆ ತನಿಖಾಧಿಕಾರಿ ಬಳಿ ರಾಧಿಕಾ ಹೇಳಿಕೆ ದಾಖಲಿಸಿಕೊಂಡಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ