/newsfirstlive-kannada/media/media_files/2025/09/01/radhika_kumaraswamy-2025-09-01-13-31-05.jpg)
ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ವಿಚಾರಣೆ ಮಾಡಿದ್ದಾರೆ. ಈ ಬಗ್ಗೆ ಮೊದಲೇ ನೋಟಿಸ್ ನೀಡಿದ್ದ ಅಧಿಕಾರಿಗಳು ರಾಧಿಕಾ ಕುಮಾರಸ್ವಾಮಿ ಅವರಿಂದ ಹೇಳಿಕೆ ದಾಖಲಿಸಿದ್ದಾರೆ.
ಎರಡು ಕೋಟಿ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ವಿಚಾರಣೆ ನಡೆಸಿದ್ದಾರೆ. ಸಿನಿಮಾ ನಿರ್ಮಾಣದಿಂದ ಬಂದ ಹಣವನ್ನು ಜಮೀರ್ ಅಹ್ಮದ್ ಖಾನ್ ಅವರಿಗೆ ನೆರವು ನೀಡಲಾಗಿದೆ. ಹಣಕಾಸು ವ್ಯವಹಾರ ಬಗ್ಗೆ ಲೋಕಾಯುಕ್ತ ತನಿಖೆ ವೇಳೆ ಇದು ಬೆಳಕಿಗೆ ಬಂದಿದೆ.
ಇದನ್ನೂ ಓದಿ:ರಸ್ತೆ ದಾಟುವಾಗ BMTC ಬಸ್ ಡಿಕ್ಕಿ.. ಜೀವ ಕಳೆದುಕೊಂಡ ವೃದ್ಧ
ಈ ಬಗ್ಗೆ ವಿವರಣೆ ನೀಡುವಂತೆ ಲೋಕಾಯುಕ್ತ ಪೊಲೀಸರು ರಾಧಿಕಾ ಅವರಿಗೆ ನೋಟಿಸ್ ನೀಡಿದ್ದರು. ನೋಟಿಸ್ ನೀಡಿದ ಹಿನ್ನಲೆಯಲ್ಲಿ ಕಳೆದ ತಿಂಗಳು ರಾಧಿಕಾ ವಿಚಾರಣೆಗೆ ಹಾಜರಾಗಿದ್ದರು. ಅವರಿಗೆ ಹಣ ನೀಡಿದ ಬಗ್ಗೆ ಸೂಕ್ತ ದಾಖಲೆಗಳನ್ನ ಒದಗಿಸಲು ಸೂಚನೆ ನೀಡಲಾಗಿತ್ತು. ಈ ವೇಳೆ ಹಣಕಾಸು ವ್ಯವಹಾರದ ಬಗ್ಗೆ ತನಿಖಾಧಿಕಾರಿ ಬಳಿ ರಾಧಿಕಾ ಹೇಳಿಕೆ ದಾಖಲಿಸಲಾಗಿದೆ. ಯಶ್ ಅಭಿನಯದ ಲಕ್ಕಿ ಸಿನಿಮಾ ನಿರ್ಮಾಣ ಮಾಡಿದ್ದ ರಾಧಿಕಾ, ಈ ವೇಳೆ ಜಮೀರ್ ಅಹ್ಮದ್ ಖಾನ್ ಜೊತೆಗೆ ಹಣಕಾಸು ವ್ಯವಹಾರ ನಡೆಸಿರುವುದು ಪತ್ತೆ ಆಗಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ