ಭಾರೀ ಮಳೆಯ ನಡುವೆ ಮತ್ತೆ ಎಚ್ಚರಿಕೆ.. 5 ಜಿಲ್ಲೆಗಳಿಗೆ ರೆಡ್ ಅಲರ್ಟ್​..!

ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಶುರುವಾಗಿದೆ. ನಿರಂತರವಾಗಿ ಸುರಿಯುತ್ತಿರೋ ಮಳೆಯಿಂದಾಗಿ ಒಂದೆಡೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಇದರ ಮಧ್ಯೆ ಹವಾಮಾನ ಇಲಾಖೆ ಮತ್ತೆ ಎಚ್ಚರಿಕೆ ನೀಡಿದೆ.

author-image
Ganesh Kerekuli
Rain alert
Advertisment

ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಶುರುವಾಗಿದೆ. ನಿರಂತರವಾಗಿ ಸುರಿಯುತ್ತಿರೋ ಮಳೆಯಿಂದಾಗಿ ಒಂದೆಡೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಇದರ ಮಧ್ಯೆ ಹವಾಮಾನ ಇಲಾಖೆ ಮತ್ತೆ ಎಚ್ಚರಿಕೆ ನೀಡಿದೆ.

ವಾಯಭಾರ ಕುಸಿತ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ ಸುರಿಯಲಿದೆ. ಉತ್ತರ ಕನ್ನಡ, ಉಡಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಹೆಚ್ಚಿನ ಮಳೆ ಆಗಲಿದೆ. ಈ ಎಲ್ಲಾ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೆಚ್ಚಿನ ಮಳೆ ಹಿನ್ನಲೆ ನದಿಗಳು ಉಕ್ಕಿಹರಿಯುತ್ತಿದ್ದು, ನದಿಪಾತ್ರದ ಜನರು ಜಾಗರೂಕತೆಯಿಂದ ಇರಲು ಸೂಚನೆ ನೀಡಿದೆ. 

ಹವಾಮಾನ ಇಲಾಖೆ ಪ್ರಕಾರ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿಂದು ಭಾರೀ ಮಳೆ ಸುರಿಯಲಿದೆ. ಕರಾವಳಿ,ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಬೀಳಲಿದೆ ಎಂದಿದೆ. ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಗದಗ, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ ಬಾಗಲಕೋಟೆ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಿದೆ. ಇನ್ನು ಬೆಂಗಳೂರಿನಲ್ಲಿ ಆಗಸ್ಟ್ 21ರ ವರೆಗೆ ಹಗುರ ಮಳೆಯ ಮುನ್ಸೂಚನೆ ನೀಡಿದೆ. 

ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಭಯಂಕರ ಮಳೆ.. ಶಾಲೆಗಳಿಗೆ ರಜೆ.. ಎಲ್ಲೆಲ್ಲಿ ಏನೆಲ್ಲ ಆಗ್ತಿದೆ..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Heavy Rain
Advertisment