ಬಿಜೆಪಿಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧದ ಹೇಳಿಕೆಗೆ ಇದಾಗಿದೆ. ಆದರೆ ಈ ಬಗ್ಗೆ ಎಲ್ಲಿಯೂ ಬಿ.ಎಲ್ ಸಂತೋಷ್ ಪ್ರಕರಣ ದಾಖಲಿಸಿಲ್ಲ. ದೂರಿನಲ್ಲಿ ಶಾಂತಿ ಕದಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಆ ವಿಡಿಯೋ ವೈರಲ್ ಆಗಿದ್ದರೂ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಆದ್ದರಿಂದ ಬೇಲ್ ಕೊಡಬೇಕು ಹಾಗೂ ಮಹೇಶ್ ತಿಮರೋಡಿ ಅವರನ್ನು ಬಂಧನ ಮಾಡಿರುವುದು ಸರಿಯಿಲ್ಲ ಅಂತ ಕೋರ್ಟ್ ಮುಂದೆ ಮನವಿ ಮಾಡಿದ್ದೇನೆ ಎಂದು ಮಹೇಶ್ ಶೆಟ್ಟಿ ತಿಮರೋಡಿ ಪರ ವಕೀಲರಾದ ವಿಜಯ್ ಅವರು ಹೇಳಿದ್ದಾರೆ.
ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಅವರನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಮಹೇಶ್ ಶೆಟ್ಟಿ ತಿಮರೋಡಿರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನೋಟಿಸ್ ಕೊಟ್ಟರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ನಿನ್ನೆ ಉಜಿರೆ ಸಮೀಪದ ಮನೆಗೆ ಆಗಮಿಸಿದ್ದ ಪೊಲೀಸರು ತಿಮರೋಡಿಯವನ್ನು ವಶಕ್ಕೆ ಪಡೆದಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ