/newsfirstlive-kannada/media/media_files/2025/11/21/chaluvarayaswamy-2025-11-21-09-34-41.jpg)
ಮಂಡ್ಯ: ಕೃಷಿ ಸಚಿವ ಚಲುವರಾಯಸ್ವಾಮಿ ತಮ್ಮ ಪುತ್ರ ಸಚಿನ್​​ಗೆ ಮಂಡ್ಯ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಪಟ್ಟ ಕಟ್ಟಲು ಮಾಸ್ಟರ್ ಪ್ಲಾನ್ ರೂಪಿಸಿದ್ದಾರಂತೆ. ಆ ಮೂಲಕ ಪುತ್ರನಿಗೆ ರಾಜಕೀಯ ಭವಿಷ್ಯ ಕಟ್ಟಿಕೊಡಲು ಟೊಂಕ ಕಟ್ಟಿ ನಿಂತಿದ್ದಾರೆ ಎಂದು ಹೇಳಲಾಗಿದೆ.
ಅಂದ್ಹಾಗೆ ಇವತ್ತು ಮಂಡ್ಯ ಡಿಸಿಸಿ ಬ್ಯಾಂಕ್​​ನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. 12 ನಿರ್ದೇಶಕ ಸ್ಥಾನಗಳ ಪೈಕಿ 11 ಮಂದಿ ಕಾಂಗ್ರೆಸ್ ಬೆಂಬಲಿತರು ಆಯ್ಕೆಯಾಗಿದ್ದಾರೆ. ಶಾಸಕ ನರೇಂದ್ರಸ್ವಾಮಿ, ಸಚಿನ್ ಚಲುವರಾಯಸ್ವಾಮಿ ಸೇರಿದಂತೆ ಐದಾರು ಮಂದಿ ಡಿಸಿಸಿ ಬ್ಯಾಂಕ್​ನ ಅಧ್ಯಕ್ಷ ಪಟ್ಟದ ಮೇಲೆ ಕಣ್ಣಿಟ್ಟಿದ್ದಾರೆ.
/filters:format(webp)/newsfirstlive-kannada/media/media_files/2025/11/21/chaluvarayaswamy-1-2025-11-21-09-36-21.jpg)
ನರೇಂದ್ರಸ್ವಾಮಿ ಸಚಿವ ಸ್ಥಾನದ ನಿರೀಕ್ಷೆಯಲ್ಲಿರೋದ್ರಿಂದ ಪೈಪೋಟಿ ನೀಡಲು ಹಿಂದೇಟು ಹಾಕಿದ್ದಾರೆ. ಉಳಿದ ಆಕಾಂಕ್ಷೆಗಳನ್ನ ಮನವೊಲಿಸಿ ಸಚಿನ್​ಗೆ ಸಚಿವ ಸ್ಥಾನ ಕೊಡಿಸಲು ಚಲುವರಾಯಸ್ವಾಮಿ ತಯಾರಿ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಅಧ್ಯಕ್ಷಗಿರಿ ಕೊಡಿಸುವ ಮೂಲಕ ಮಗನ ರಾಜಕೀಯ ಬುನಾದಿಗೆ ಮತ್ತೊಂದು ಹೆಜ್ಜೆ ಇಡಲಿದ್ದಾರೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿ ಕೇಳಿಬಂದಿದೆ. ಮಾಹಿತಿಗಳ ಪ್ರಕಾರ, ಸಚಿನ್ ಚಲುವರಾಯಸ್ವಾಮಿಗೆ ಮಂಡ್ಯ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ ಬಹುತೇಕ ಫಿಕ್ಸ್ ಎನ್ನಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us