/newsfirstlive-kannada/media/media_files/2025/10/06/mb-patil-2025-10-06-11-12-04.jpg)
ಕೈಗಾರಿಕಾ ಖಾತೆ ಸಚಿವ ಎಂ.ಬಿ.ಪಾಟೀಲ್
ಮಂಡ್ಯದ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಕೇಂದ್ರದ ಉಕ್ಕು ಮತ್ತು ಕೈಗಾರಿಕಾ ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸಲು ಉತ್ಸುಕವಾಗಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಭೂಮಿ ನೀಡಬೇಕೆಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಗೆ ಕುಮಾರಸ್ವಾಮಿ ಅವರೇ ಪತ್ರ ಬರೆದು ಮನವಿ ಮಾಡಿದ್ದರು. ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಮಂಜು ಕೂಡ ವಿಧಾನಸಭೆಯ ಅಧಿವೇಶನದಲ್ಲೂ ಈ ಬಗ್ಗೆ ಪ್ರಶ್ನೆ ಕೇಳಿದ್ದರು. ಆದರೇ, ಖಾಸಗಿ ಕಂಪನಿಯಿಂದ ಕೈಗಾರಿಕೆ ಸ್ಥಾಪನೆಗೆ ಪ್ರಸ್ತಾವನೆ ಬಂದಿಲ್ಲ. ಭೂಮಿ ನೀಡುವಂತೆ ಕೆಐಎಡಿಬಿಗೂ ಮನವಿ ಮಾಡಿಲ್ಲ ಎಂದು ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಉತ್ತರ ನೀಡಿತ್ತು.
ಆದರೇ, ಮಂಡ್ಯದಲ್ಲಿ ಸೆಮಿಕಂಡಕ್ಟರ್ ತಯಾರಿಕಾ ಘಟಕಕ್ಕೆ 100 ಎಕರೆ ಭೂಮಿ ನೀಡಲು ಸಿದ್ದ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಈ ಬಗ್ಗೆ ಟ್ವೀಟರ್ ನಲ್ಲಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಟ್ವೀಟ್ ಮಾಡಿದ್ದಾರೆ.
ಸೆಮಿಕಂಡಕ್ಟರ್ ವಲಯದಲ್ಲಿ ಹೂಡಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ, ಮಂಡ್ಯ ಜಿಲ್ಲೆಯಲ್ಲಿ ಸೆಮಿಕಂಡಕ್ಟರ್ ಘಟಕ ಸ್ಥಾಪನೆಗೆ 100 ಎಕರೆ ಭೂಮಿ ನೀಡಲು #ನಮ್ಮಸರ್ಕಾರ ಸಿದ್ಧವಿದೆ. ಜೊತೆಗೆ ಅಗತ್ಯವಿರುವ ನೀರು, ವಿದ್ಯುತ್ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು.
ಈ ಕ್ರಮದಿಂದ ಮಂಡ್ಯ ಜಿಲ್ಲೆಗೆ ನೂತನ ಹೂಡಿಕೆಗಳು ಹರಿದುಬಂದು, ಉದ್ಯೋಗಾವಕಾಶಗಳು ವಿಸ್ತರಿಸಲಿವೆ. ಅತ್ಯಾಧುನಿಕ ತಂತ್ರಜ್ಞಾನವನ್ನು ಆಹ್ವಾನಿಸುವ ಈ ಮಹತ್ವಾಕಾಂಕ್ಷೆಯ ಹೆಜ್ಜೆ, ಮುಂದಿನ ತಲೆಮಾರಿಗೂ ಭದ್ರ ಭವಿಷ್ಯವನ್ನು ಕಟ್ಟಿಕೊಡುವುದರ ಜೊತೆಗೆ ನಾಳಿನ ಹೊಸ ಕರ್ನಾಟಕ ನಿರ್ಮಾಣಕ್ಕೆ ದೃಢ ಅಡಿಪಾಯವಾಗಲಿದೆ ಎಂದು ಕೈಗಾರಿಕಾ ಖಾತೆ ಸಚಿವ ಎಂ.ಬಿ.ಪಾಟೀಲ್ ಟ್ವೀಟ್ ಮಾಡಿದ್ದಾರೆ.
#semiconductors
ಮಂಡ್ಯದಲ್ಲಿ ಸೆಮಿಕಂಡಕ್ಟರ್ ತಯಾರಿಕಾ ಘಟಕಕ್ಕೆ 100 ಎಕರೆ ಭೂಮಿ!
— M B Patil (@MBPatil) December 25, 2025
ಸೆಮಿಕಂಡಕ್ಟರ್ ವಲಯದಲ್ಲಿ ಹೂಡಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ, ಮಂಡ್ಯ ಜಿಲ್ಲೆಯಲ್ಲಿ ಸೆಮಿಕಂಡಕ್ಟರ್ ಘಟಕ ಸ್ಥಾಪನೆಗೆ 100 ಎಕರೆ ಭೂಮಿ ನೀಡಲು #ನಮ್ಮಸರ್ಕಾರ ಸಿದ್ಧವಿದೆ. ಜೊತೆಗೆ ಅಗತ್ಯವಿರುವ ನೀರು, ವಿದ್ಯುತ್ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು… pic.twitter.com/Kuj6QPGCcF
ಆದರೇ, ಕೆಐಎಡಿಬಿ ಇನ್ನೂ ಮಂಡ್ಯ ಜಿಲ್ಲೆಯ ಯಾವುದೇ ತಾಲ್ಲೂಕಿನಲ್ಲೂ ಭೂಮಿಯನ್ನು ಕೈಗಾರಿಕೆಗಾಗಿ ಸ್ವಾಧೀನಪಡಿಸಿಕೊಂಡಿಲ್ಲ. ಹೀಗಾಗಿ ಆದಷ್ಟು ಬೇಗ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಬಳಿಕ ಸೆಮಿಕಂಡಕ್ಟರ್ ಸ್ಥಾಪಿಸುವ ಕಂಪನಿಗೆ ನೀಡಬೇಕಾಗಿದೆ.
ಮಂಡ್ಯ ಲೋಕಸಭಾ ಸದಸ್ಯ ಎಚ್.ಡಿ.ಕುಮಾರಸ್ವಾಮಿ ಅವರೇ ಕೇಂದ್ರದ ಉಕ್ಕು ಮತ್ತು ಭಾರಿ ಕೈಗಾರಿಕಾ ಖಾತೆ ಸಚಿವರಾಗಿರುವುದರಿಂದ ಮಂಡ್ಯದಲ್ಲಿ ಸೆಮಿಕಂಡಕ್ಟರ್ ಘಟಕ ಸ್ಥಾಪನೆ ಸಾಧ್ಯ. ಇದಕ್ಕೆ ಈಗ ಕರ್ನಾಟಕ ರಾಜ್ಯ ಸರ್ಕಾರ ಭೂಮಿ ಒದಗಿಸುವ ಕೆಲಸವನ್ನು ಮಾಡಬೇಕು.
![]()
ಅಮೆರಿಕಾದ ಸ್ಯಾನ್ಸನ್ ಗ್ರೂಪ್ ಕಂಪನಿಯು ಸೆಮಿಕಂಡಕ್ಟರ್ ಫ್ಯಾಬ್ರಿಕೇಷನ್ ಘಟಕವನ್ನು ಮಂಡ್ಯ ಜಿಲ್ಲೆಗೆ ತರಬೇಕು ಅನ್ನೋದು ಕುಮಾರಸ್ವಾಮಿ ಅವರ ಆಸೆ. ಈ ಕಂಪನಿ ಮಂಡ್ಯ ಜಿಲ್ಲೆಗೆ ಬಂದರೇ, 30 ರಿಂದ 40 ಸಾವಿರ ಮಂದಿಗೆ ಉದ್ಯೋಗ ಸಿಗುತ್ತೆ ಎಂಬ ನಿರೀಕ್ಷೆ ಇದೆ.
ಆದರೇ, ಸೆಮಿಕಂಡಕ್ಟರ್ ಘಟಕ ಸ್ಥಾಪನೆಗೆ ರಾಜ್ಯ ಸರ್ಕಾರ ಭೂಮಿ ನೀಡುತ್ತಿಲ್ಲ ಎಂದು ಜೆಡಿಎಸ್ ಆರೋಪಿಸುತ್ತಿತ್ತು. ಆದರೇ, ಈಗ ರಾಜ್ಯ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರೇ ಮಂಡ್ಯದಲ್ಲಿ ಸೆಮಿಕಂಡಕ್ಟರ್ ಘಟಕ ಸ್ಥಾಪನೆಗೆ 100 ಎಕರೆ ಭೂಮಿ ನೀಡಲು ಸಿದ್ದ ಎಂದಿದ್ದಾರೆ.
![]()
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us