/newsfirstlive-kannada/media/media_files/2025/12/06/hdk-apology-to-swamiji-2025-12-06-18-31-53.jpg)
ನಿರ್ಮಲಾನಂದನಾಥ ಸ್ವಾಮೀಜಿಗಳಿಗೆ ಕ್ಷಮೆಯಾಚಿಸಿದ ಕುಮಾರಸ್ವಾಮಿ
ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದ ನಾಥ ಸ್ವಾಮೀಜಿ ಅವರಿಗೆ ಕ್ಷಮೆ ಕೇಳಿದ್ದಾರೆ. ಮಂಡ್ಯದ ವಿ.ಸಿ.ಫಾರಂನಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿಗಳಿಗೆ ಕುಮಾರಸ್ವಾಮಿ ಕೇಳಿದ್ದಾರೆ. ಬಹಿರಂಗ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳಿಗೆ ಕುಮಾರಸ್ವಾಮಿ ಕ್ಷಮೆಯಾಚಿಸಿದ್ದಾರೆ.
ಪ್ರಸಕ್ತ ರಾಜಕೀಯ ವಿದ್ಯಮಾನಗಳು ಏನು ನಡೆಯುತ್ತಿವೆ ಎಂದು ಎಲ್ಲರಿಗೂ ಗೊತ್ತು. ಈ ಬಗ್ಗೆ ನಮ್ಮ ನಿರ್ಮಲಾನಂದನಾಥ ಶ್ರೀಗಳು ಮಾತನಾಡಿದ್ದಾರೆ. ಅವರು ಮಾತಾಡಿದ್ದಕ್ಕೆ ಇನ್ಯಾರೋ ಮಾತಾಡಿದ್ದಾರೆ. ನಮ್ಮ ಸ್ವಾಮೀಜಿಯಷ್ಟು ದೇಶದ ಇತಿಹಾಸದಲ್ಲಿ ಶಿಕ್ಷಣ ಹೊಂದಿರುವವರು ಮತ್ತೊಬ್ಬರು ಯಾರೂ ಇಲ್ಲ. ಸ್ವಾಮೀಜಿಗಳು ಅವರದ್ದೇ ಆದ ಕಲ್ಪನೆಗಳನ್ನು ಹೊಂದಿದ್ದಾರೆ. ಇಂತಹ ಸ್ವಾಮಿಗಳು ಇಲ್ಲಿಗೆ ಬರಬಾರದು. ಅವರಿಗೆ ಅಗೌರವ ಆಗಬಾರದು ಎಂಬ ದೃಷ್ಟಿಯಿಂದ ರಾಜಕೀಯವಾಗಿ ಬಳಕೆ ಮಾಡಿಕೊಳ್ಳಬಾರದು ಎಂದಿದ್ದೆ.
ನಮ್ಮ ಹಾಗೂ ದೊಡ್ಡ ಸ್ವಾಮೀಜಿಗಳ ಸಂಬಂಧ ಹಲವರಿಗೆ ಗೊತ್ತಿಲ್ಲ. ಬಾಲಗಂಗಾಧರನಾಥ ಸ್ವಾಮೀಜಿಗಳು ಸಮಾಜದ ಗೌರವ ಉಳಿಸಲಿಕ್ಕೆ ಬೀದಿಗೆ ಬಂದವರು. ಅವರಿಗೆ ದೇವೇಗೌಡರು ಸಿಎಂ ಆಗಲಿ ಎನ್ನುವುದು ಮನಸ್ಸಿನಲ್ಲಿತ್ತು. ನನ್ನನ್ನು ಕಂಡರೂ ಅವರಿಗೆ ತುಂಬಾ ಇಷ್ಟವಿತ್ತು. ನನ್ನಿಂದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗೆ ಅಪಚಾರ ಆಗಿದ್ರೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ ಎಂದು ನಿರ್ಮಲಾನಂದನಾಥ ಸ್ವಾಮೀಜಿಗಳ ಸಮ್ಮುಖದಲ್ಲಿ ಕುಮಾರಸ್ವಾಮಿ ಕ್ಷಮೆ ಕೇಳಿದ್ದಾರೆ.
ಮಂಡ್ಯಕ್ಕೆ ಕನಿಷ್ಠ ಒಂದು ಕಾರ್ಖಾನೆ ತರುವೆ-ಕುಮಾರಸ್ವಾಮಿ
ಕನಿಷ್ಠ ಒಂದು ಕಾರ್ಖಾನೆಯನ್ನಾದರು ಮಂಡ್ಯಕ್ಕೆ ತರಲು ಒಂದು ಹೆಜ್ಜೆ ಇಟ್ಟಿದ್ದೇನೆ. ಭದ್ರಾವತಿ ಕಾರ್ಖಾನೆ ಪುನಶ್ಚೇತನಕ್ಕೆ ಚಿಂತನೆ ನಡೆಸಲಾಗಿದೆ. ನನ್ನ ಮೇಲೆ ಅನುಮಾನ ಬೇಡ, ನಾನು ಎಲ್ಲೇ ಇದ್ದರೂ ನನ್ನ ಹೃದಯದಲ್ಲಿ ಮಂಡ್ಯಕ್ಕೆ ಮೊದಲ ಸ್ಥಾನ. ಪ್ರತಿಭಟನಾನಿರತ ಅಂಗನವಾಡಿ ಕಾರ್ಯಕರ್ತೆಯರನ್ನ ದೆಹಲಿಗೆ ಕರೆಸಿ ಸಚಿವರನ್ನ ಭೇಟಿ ಮಾಡಿಸಿದೆ. ಅವರ ಸಮಸ್ಯೆಗಳಿಗೆ ಈ ಬಜೆಟ್‌ನಲ್ಲಿ ಕನಿಷ್ಟ ಪರಿಹಾರ ಆದರೂ ಸಿಗಲಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
/filters:format(webp)/newsfirstlive-kannada/media/media_files/2025/12/06/hdk-at-mandya-2025-12-06-13-21-40.jpg)
ಮಂಡ್ಯದ ಕೃಷಿಮೇಳದಲ್ಲಿ ರೈತರಿಂದ 30 ರೂ ಪಡೆದು ಊಟ ವಿತರಣೆ ವಿಚಾರ ಕುಮಾರಸ್ವಾಮಿ ಅವರ ಗಮನಕ್ಕೆ ಬಂದಿದೆ. ಮಕ್ಕಳ ಊಟಕ್ಕೆ 20 ರೂಪಾಯಿ, ಹಿರಿಯರ ಊಟಕ್ಕೆ 30 ರೂಪಾಯಿಯನ್ನು ಆಯೋಜಕರು ನಿಗದಿ ಮಾಡಿದ್ದರು. ಈ ವಿಷಯ ತಿಳಿದ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಜನರ ಊಟದ ಹಣವನ್ನು ಸಂಪೂರ್ಣವಾಗಿ ತಾವೇ ಭರಿಸುವುದಾಗಿ ಹೇಳಿದ್ದಾರೆ. ಸ್ವಂತ ಹಣದಲ್ಲಿ ಊಟದ ಖರ್ಚಿನ ಹಣವನ್ನು ಭರಿಸುವುದಾಗಿ ಹೇಳಿದ್ದಾರೆ. 2 ದಿನದ ಊಟದ ಖರ್ಚು ಆಗಿ 3.40 ಲಕ್ಷ ರೂಪಾಯಿ ಹಣವನ್ನು ಮಂಡ್ಯ ಕೃಷಿ ವಿವಿ ವಿಶೇಷಾಧಿಕಾರಿಗೆ ಚೆಕ್ ಮೂಲಕ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us