/newsfirstlive-kannada/media/media_files/2025/08/26/mn_anucheth_ips-2025-08-26-07-34-09.jpg)
ಬೆಂಗಳೂರು: ಧರ್ಮಸ್ಥಳದಲ್ಲಿ ಅಪರಾಧಗಳು ನಡೆದಿವೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸುತ್ತಿದ್ದು ಮಹತ್ವದ ಮಾಹಿತಿಗಳನ್ನು ಸಂಗ್ರಹಿಸುತ್ತಿದೆ. ಆದರೆ ಈ ಇನ್ವೆಸ್ಟಿಗೇಶನ್ ನಡೆಯುತ್ತಿರುವಾಗಲೇ ಎಸ್‌ಐಟಿ ಟೀಮ್ನಲ್ಲಿದ್ದ ಐಪಿಎಸ್, ಡೆಪ್ಯೂಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಎಂ.ಎನ್ ಅನುಚೇತ್ ಅವರು ಈಗಾಗಲೇ ಅಮೆರಿಕದಲ್ಲಿದ್ದಾರೆ.
ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡದಲ್ಲಿ ಒಬ್ಬರಾಗಿರುವ ಐಪಿಎಸ್ ಅಧಿಕಾರಿ ಎಂ.ಎನ್ ಅನುಚೇತ್ ಅವರು ಈಗಾಗಲೇ ಅಮೆರಿಕದಲ್ಲಿದ್ದಾರೆ. ತನಿಖೆ ನಿರ್ಣಾಯಕ ಹಂತದಲ್ಲಿ ಇರುವಾಗಲೇ ಎಂ.ಎನ್ ಅನುಚೇತ್ ವಿದೇಶ ಪ್ರವಾಸಕ್ಕೆ ತೆರಳಿರುವುದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಇದನ್ನೂ ಓದಿ:ಧರ್ಮಸ್ಥಳ; ಮಾಸ್ಕ್ಮ್ಯಾನ್ ಚಿನ್ನಯ್ಯನ 2ನೇ ಹೆಂಡತಿ ಮಲ್ಲಿಕಾ ಶಾಕಿಂಗ್ ಹೇಳಿಕೆ
ಅಮೆರಿಕದಲ್ಲಿ ನಡೆಯುತ್ತಿರುವ ಇಂಟೆಲಿಜೆಂಟ್ ಟ್ರಾನ್ಸ್‌ಪೋರ್ಟೇಷನ್ ಸೊಸೈಟಿ ಆಫ್ ಅಮೆರಿಕ ವರ್ಲ್ಡ್ ಕಾಂಗ್ರೆಸ್- 2025 ಕಾರ್ಯಕ್ರಮದಲ್ಲಿ ಭಾಗವಹಿಸಲು ಎಂ.ಎನ್ ಅನುಚೇತ್ ಅವರು ತೆರಳಿದ್ದಾರೆ. ಈ ಕಾರ್ಯಕ್ರಮಕ್ಕೆ ಹೋಗಲು ರಾಜ್ಯ ಸರ್ಕಾರವು ಎಂ.ಎನ್ ಅನುಚೇತ್ ಅವರಿಗೆ ಆಗಸ್ಟ್ 19 ರಿಂದ ಆಗಸ್ಟ್ 31ರ ವರೆಗೆ ವೇತನ ಸಹಿತ ರಜೆಯನ್ನು ಮಂಜೂರು ಮಾಡಿದೆ.
ಈ ಹಿಂದೆ ಬೆಂಗಳೂರು ಸಂಚಾರ ಪೊಲೀಸ್ ಮುಖ್ಯಸ್ಥರಾಗಿದ್ದ ಎಂ.ಎನ್ ಅನುಚೇತ್ ಅವರು ಆಗಸ್ಟ್ 18ರಂದೇ ಅಮೆರಿಕಕ್ಕೆ ತೆರಳಿದ್ದಾರೆ. ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಪ್ರಭಾವಿಗಳ ಸೂಚನೆ ಮೇರೆಗೆ ಮಾಸ್ಕ್ಮ್ಯಾನ್ ಚಿನ್ನಯ್ಯ ಶವಗಳನ್ನು ಹೂತು ಹಾಕಿದ್ದೇನೆ ಎಂದು ದೂರಿನ ಮೇಲೆ ತನಿಖೆ ನಡೆಯುತ್ತಿದೆ. ಈ ತನಿಖೆ ನಡೆವೆಯೇ ಎಂ.ಎನ್ ಅನುಚೇತ್ ಅವರು ಅಮೆರಿಕಕ್ಕೆ ತೆರಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ