/newsfirstlive-kannada/media/media_files/2025/09/16/dinesh_kumar-2025-09-16-22-30-54.jpg)
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA)ದ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಆಯುಕ್ತ ದಿನೇಶ್ ಕುಮಾರನ್ನು ಇಡಿ ಅಧಿಕಾರಿಗಳು ವಿಚಾರಣೆಗೆ ಎಂದು ಕರೆದು ಬಂಧಿಸಿದ್ದಾರೆ. ಇಂದು ಇಡಿ ವಿಚಾರಣೆಗೆ ಬರುವಂತೆ ದಿನೇಶ್ ಕುಮಾರ್‌ಗೆ ನೋಟಿಸ್ ನೀಡಲಾಗಿತ್ತು. ವಿಚಾರಣೆಗೆ ಬಂದಿದ್ದ ದಿನೇಶ್ ಕುಮಾರ್​ರನ್ನು ವಿಚಾರಣೆ ನಡೆಸಿ ಬಳಿಕ ಅರೆಸ್ಟ್ ಮಾಡಲಾಗಿದೆ. ಶೀಘ್ರದಲ್ಲೇ ಇಡಿ ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಹಾಜರು ಪಡಿಸುವ ಸಾಧ್ಯತೆ ಇದೆ.
ಮೈಸೂರಿನಲ್ಲಿ ಅರೆಸ್ಟ್ ಆಗಿರುವ ದಿನೇಶ್ ಕುಮಾರ್ ಅವರನ್ನು ಇಡಿ ಬೆಂಗಳೂರಿಗೆ ಕರೆದುಕೊಂಡು ಬರುತ್ತಿದೆ. ಈಗಾಗಲೇ ಇವರ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಅಕ್ರಮ ಸೈಟ್ ಹಂಚಿಕೆ ಆರೋಪ ಮಾಜಿ ಆಯುಕ್ತ ದಿನೇಶ್ ಕುಮಾರ್ ಮೇಲಿದೆ. ಹೀಗಾಗಿ ಲೋಕಾಯುಕ್ತ ಅಧಿಕಾರಿಗಳು ಮಾಡಿದ್ದ ಮನವಿಗೆ ಇಂದು ತನಿಖೆಗಾಗಿ ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಇದರ ನಡುವೆ ಇಡಿ ಅವರನ್ನು ಅರೆಸ್ಟ್ ಮಾಡಿದೆ.
ದಿನೇಶ್ ಕುಮಾರ್ ಅವರು ಅಕ್ರಮ ಹಣ ವರ್ಗಾವಣೆ ಮಾಡಿರೋದು ಸಾಬೀತಾಗಿದೆ ಎಂದು ಈ ಹಿಂದೆ ಇಡಿ ಹೇಳಿತ್ತು. ನಕಲಿ ದಾಖಲೆ ಸೃಷ್ಟಿಸಿ ಸೈಟ್​ಗಳನ್ನು ಮರುಹಂಚಿಕೆ ಮಾಡುವ ಮೂಲಕ ಲಾಭ ಪಡೆದುಕೊಂಡಿದ್ದಾರೆ. ಹಣ ಪಡೆದು ಆಸ್ತಿ ಗಳಿಕೆ ಮಾಡಿರುವುದಕ್ಕೆ ದಾಖಲೆಗಳು ಇವೆ ಎಂದು ಇಡಿ ಈ ಹಿಂದೆಯೇ ಹೇಳಿತ್ತು.
/filters:format(webp)/newsfirstlive-kannada/media/post_attachments/wp-content/uploads/2024/07/MYS-MUDA.jpg)
ದಿನೇಶ್ ಕುಮಾರ್ ಅವರು 2022ರಲ್ಲಿ ಮುಡಾದ ಆಯುಕ್ತರಾಗಿ ಆಯ್ಕೆ ಆಗಿದ್ದರು. ಇದಾದ ಮೇಲೆ ಇವರ ವಿರುದ್ಧ ಮುಡಾದಲ್ಲಿ 50:50 ಅನುಪಾತದಡಿ ಸ್ಥಳಗಳನ್ನು ಹಂಚಿಕೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಅವರನ್ನು ಬೇರೆ ಕಡೆ ವರ್ಗಾವಣೆ ಮಾಡಲಾಗಿತ್ತು. ಹಾವೇರಿ ವಿವಿಯ ಕುಲಸಚಿವ ಹುದ್ದೆ ಪಡೆದುಕೊಂಡಿದ್ದರು. ಇದು ಕೂಡ ಸಾಕಷ್ಟು ಚರ್ಚೆ ಆಗಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us