/newsfirstlive-kannada/media/media_files/2025/11/07/bandipura-safari-closed-from-today-2025-11-07-12-36-05.jpg)
ಬಂಡಿಪುರ, ನಾಗರಹೊಳೆ ಸಫಾರಿ ಇಂದಿನಿಂದ ಬಂದ್
ಹುಲಿ ದಾಳಿಯಿಂದ ಮೈಸೂರು ಜಿಲ್ಲೆಯಲ್ಲಿ ಮೂವರು ರೈತರು ಸಾವನ್ನಪ್ಪಿದ್ದಾರೆ. ಹುಲಿಗಳು ಕಾಡಿನಿಂದ ನಾಡಿಗೆ ಬಂದು ರೈತರ ಮೇಲೆ ದಾಳಿ ನಡೆಸಿ ಕೊಂದು ಹಾಕಿವೆ. ಇದರಿಂದಾಗಿ ಕಾಡಂಚಿನ ಗ್ರಾಮಗಳ ರೈತರು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬಂಡಿಪುರ, ನಾಗರಹೊಳೆಯಲ್ಲಿ ಸಫಾರಿ ನಡೆಸುತ್ತಿರುವುದರಿಂದ ವನ್ಯಜೀವಿಗಳಿಗೆ ತೊಂದರೆಯಾಗುತ್ತಿದೆ ಎಂಬ ಅಭಿಪ್ರಾಯವನ್ನು ವನ್ಯಜೀವಿ ತಜ್ಞರು ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಇಂದಿನಿಂದಲೇ ಬಂಡೀಪುರ, ನಾಗರಹೊಳೆ ಸಫಾರಿಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ.
/filters:format(webp)/newsfirstlive-kannada/media/media_files/2025/11/07/bandipura-safari-closed-order-copy-2025-11-07-13-36-17.jpg)
ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಸಫಾರಿ ಬಂದ್ ಮಾಡಿ ಹೊರಡಿಸಿದ ಆದೇಶದ ಪ್ರತಿ
ಹುಲಿ ದಾಳಿ ಹೆಚ್ಚಾದ ಹಿನ್ನಲೆಯಲ್ಲಿ ಸಫಾರಿ ಬಂದ್ ಮಾಡಿ ಆದೇಶ ಮಾಡಲಾಗಿದೆ. ಅರಣ್ಯ ಇಲಾಖೆಯಿಂದ ಸಫಾರಿ ಬಂದ್ ಮಾಡಿ ಆದೇಶ ಮಾಡಲಾಗಿದೆ. ಎಲ್ಲಾ ಸಿಬ್ಬಂದಿಗಳನ್ನು ಹುಲಿ ಕಾರ್ಯಾಚರಣೆ ಮಾಡಲು ಬಳಸಲು ನಿರ್ಧರಿಸಲಾಗಿದೆ.
/filters:format(webp)/newsfirstlive-kannada/media/media_files/2025/11/07/bandipura-safari-closed-from-today-1-2025-11-07-12-38-28.jpg)
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us