/newsfirstlive-kannada/media/media_files/2026/01/13/dcm-dk-shivakumar-met-rahul-gandhi-1-2026-01-13-18-18-02.jpg)
ಮೈಸೂರಿನಲ್ಲಿ ರಾಹುಲ್ ಗಾಂಧಿ -ಸಿಎಂ, ಡಿಸಿಎಂ ಮಾತುಕತೆ
ಮೈಸೂರಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುಪ್ತವಾಗಿ ಮಾತುಕತೆ ನಡೆಸಿದ್ದಾರೆ. ತಮಿಳುನಾಡಿಗೆ ತೆರಳಲು ಮೈಸೂರು ಏರ್ ಪೋರ್ಟ್ ಗೆ ಬಂದಿದ್ದ ರಾಹುಲ್ ಗಾಂಧಿ ಅವರನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಏರ್ ಪೋರ್ಟ್ ನಲ್ಲಿ ಭೇಟಿಯಾಗಿದ್ದಾರೆ. ಈ ವೇಳೆ ತಮ್ಮ ಪಕ್ಷದ ನಾಯಕರು, ಅಧಿಕಾರಿಗಳಿಂದ ರಾಹುಲ್ ಗಾಂಧಿ ಅವರನ್ನು ಸ್ಪಲ್ಪ ದೂರಕ್ಕೆ ಕರೆದುಕೊಂಡು ಹೋದ ಡಿ.ಕೆ.ಶಿವಕುಮಾರ್ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ. ಕೆಲ ನಿಮಿಷಗಳ ಕಾಲ ರಾಹುಲ್ ಗಾಂಧಿ ಜೊತೆ ಡಿ.ಕೆ.ಶಿವಕುಮಾರ್ ಒಬ್ಬರೇ ಮಾತುಕತೆ ನಡೆಸಿದ್ದಾರೆ.
ಮೈಸೂರಿನಲ್ಲಿ ರಾಹುಲ್ ಗಾಂಧಿ ಜೊತೆ ಡಿಕೆಶಿ ಪ್ರತ್ಯೇಕ ಚರ್ಚೆ ನಡೆಸಿರುವುದು ಈಗ ಕುತೂಹಲಕ್ಕೆ ಕಾರಣವಾಗಿದೆ. ರಾಹುಲ್ ಗಾಂಧಿ ಜೊತೆ ಗುಪ್ತ ಮಾತುಕತೆಯನ್ನು ಡಿ.ಕೆ. ಶಿವಕುಮಾರ್ ನಡೆಸಿದ್ದಾರೆ. ರಾಹುಲ್ ಗಾಂಧಿ ಮೈಸೂರು ಏರ್ ಪೋರ್ಟ್ ನಲ್ಲಿ ವಿಮಾನದಿಂದ ಇಳಿದು, ಹೆಲಿಕಾಪ್ಟರ್ ಹತ್ತುವ ಮುನ್ನ ಈ ಮಾತುಕತೆ ನಡೆದಿದೆ. ರಾಹುಲ್ ಗಾಂಧಿ ಜೊತೆ ಡಿ.ಕೆ.ಶಿವಕುಮಾರ್ ಮಾತುಕತೆ ನಡೆಸುತ್ತಿರುವ ವಿಡಿಯೋ ನ್ಯೂಸ್ ಫಸ್ಟ್ ಗೆ ಲಭ್ಯವಾಗಿದೆ.
/filters:format(webp)/newsfirstlive-kannada/media/media_files/2026/01/13/dcm-dk-shivakumar-met-rahul-gandhi-2026-01-13-17-51-27.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ..
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us