/newsfirstlive-kannada/media/media_files/2025/09/29/mysore-odanadi-seva-samsthe-2025-09-29-14-15-57.jpg)
ಮೈಸೂರಿನ ಒಡನಾಡಿ ಸೇವಾ ಸಂಸ್ಥೆ
ಋತುಮತಿಯಾದ ಬಾಲಕಿಯರನ್ನು ಲೈಂಗಿಕ ಕೃತ್ಯಗಳಿಗೆ ಪೂರೈಸುತ್ತಿದ್ದ ಜಾಲವನ್ನು ಮೈಸೂರು ಪೊಲೀಸರು ಭೇಧಿಸಿದ್ದಾರೆ. ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನಮ್ಮ ಸಮಾಜದಲ್ಲಿ ಋತುಮತಿಯಾದ ಬಾಲಕಿಯರ ಜೊತೆ ಮೊದಲ ಲೈಂಗಿಕ ಸಂಪರ್ಕ ನಡೆಸಿದ್ರೆ ಮಾನಸಿಕ ಕಾಯಿಲೆಗಳು, ಲೈಂಗಿಕ ಕಾಯಿಲೆಗಳು ದೂರ ಆಗುತ್ತಾವೆ ಎಂಬ ಮೂಢನಂಬಿಕೆ ಇದೆ. ಋತುಮತಿಯಾದ ಬಾಲಕಿಯರನ್ನು ಲೈಂಗಿಕ ಕೃತ್ಯಕ್ಕೆ ಪೂರೈಸುತ್ತಿದ್ದ ಓರ್ವ ಮಹಿಳೆ ಹಾಗೂ ಓರ್ವ ಪುರುಷನನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕಿ ಜೊತೆ ಲೈಂಗಿಕ ಸಂಪರ್ಕಕ್ಕೆ ಓರ್ವ ಮಹಿಳೆ ಹಾಗೂ ಓರ್ವ ಪುರುಷ 20 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಋತುಮತಿಯಾದ ಅಪ್ರಾಪ್ತ ಬಾಲಕಿಯನ್ನು ಬೆಂಗಳೂರಿನ ನಿವಾಸಿ ಶೋಭಾ ಎಂಬಾಕೆ ಟಾರ್ಗೆಟ್ ಮಾಡಿದ್ದರು. ಈಕೆಯ ಜೊತೆಗೆ ತುಳಸೀಕುಮಾರ್ ಎಂಬಾತನನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ಒಡನಾಡಿ ಸಂಸ್ಥೆಯು ಈ ಬಗ್ಗೆ ಪೊಲೀಸರಿಗೆ ಮಾಹಿತಿ ಮತ್ತು ದೂರು ನೀಡಿತ್ತು. ಒಡನಾಡಿ ಸೇವಾಸಂಸ್ಥೆ ಹಾಗೂ ಮಕ್ಕಳ ಕಲ್ಯಾಣ ಸಮಿತಿ ಹಾಗೂ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಾಲಕಿಯನ್ನು ವೇಶ್ಯಾವಾಟಿಕೆಗೆ ಇಳಿಸುವ ಪ್ರಯತ್ನವನ್ನು ಆರೋಪಿಗಳು ಮಾಡಿದ್ದರು. ಬಾಲಕಿಯನ್ನು ಬಳಸಿಕೊಂಡು ಹಣ ಮಾಡಲು ಮುಂದಾಗಿದ್ದರು. ಬೇರೆ ದೇಶಗಳಲ್ಲಿ ಇಂಥ ಪ್ರಕರಣಗಳು ನಡೆಯುತ್ತಾವೆ. ನಮ್ಮ ದೇಶದಲ್ಲೂ ಇಂಥ ಕೇಸ್ ಗಳ ಬಗ್ಗೆ ಕೇಳಿದ್ದೇವು. ಆದರೇ, ಇಲ್ಲೂ 20 ಲಕ್ಷ ರೂಪಾಯಿಗೆ ಬಾಲಕಿಯನ್ನು ಏನ್ ಬೇಕಾದರೂ ಮಾಡಿಕೊಳ್ಳಿ ಎಂದು ಆರೋಪಿಗಳು ಹೇಳಿದ್ದರು. ಈಗ ನಾವೇ ಕಣ್ಣಾರೆ ಕಂಡು ಬಾಲಕಿಯನ್ನು ರಕ್ಷಣೆ ಮಾಡಿದ್ದೇವೆ. ಇದರ ಹಿಂದೆ ದೊಡ್ಡ ಜಾಲ ಇದೆ ಎಂದು ಅನ್ನಿಸುತ್ತಿದೆ. ಸಾಮಾಜಿಕ ಜಾಲತಾಣಗಳ ಮೂಲಕವೂ ಇವೆಲ್ಲವೂ ಆಗುತ್ತಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೈಸೂರಿನ ವಿಜಯ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ ಎಂದು ಮೈಸೂರಿನ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಹಾಗೂ ಪರಶು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.