/newsfirstlive-kannada/media/post_attachments/wp-content/uploads/2023/09/HDK_KAVERI.jpg)
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಇಂದು ಪೋನ್ ಟ್ಯಾಪಿಂಗ್ ಬಾಂಬ್ ಸಿಡಿಸಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈಗ ಪೋನ್ ಟ್ಯಾಪಿಂಗ್ ನಡೆಯುತ್ತಿದೆ ಎಂದಿದ್ದಾರೆ. ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು. ಈಗಲೂ ಫೋನ್ ಟ್ಯಾಪಿಂಗ್ ಇದೆ. ಕೆಲವರು ಫೋನ್ ಟ್ಯಾಪಿಂಗ್ ಮಾಡಿಯೂ ಪತಿವ್ರತೆ ರೀತಿ ವರ್ತಿಸುತ್ತಾರೆ. ನಾನು ಸತ್ಯ ಹೇಳುತ್ತೇನೆ ಕೇಳಿ, ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು. ಇವತ್ತಿನ ಸರ್ಕಾರದಲ್ಲಿ ಅದು ಎಷ್ಟು ಹೆಚ್ಚಾಗಿದೆ ಎಂಬುದು ಅವರನ್ನೇ ಕೇಳಬೇಕು ಎಂದಿದ್ದಾರೆ. ಅವರದ್ದೇ ಶಾಸಕರ ಮೇಲೆ ಅವರದ್ದೇ ಸಚಿವರು ಗುಪ್ತಚಾರಿಕೆ ಮಾಡುತ್ತಿರುವುದು ಇದೇ ಮೊದಲು. ಸಿಎಂ ಆಗಬೇಕೆಂದುಕೊಂಡವರು ಅವರ ಸರ್ಕಾರದ ಮೇಲೆ ಗುಪ್ತಚರಿಕೆ ಆರಂಭಿಸಿರುವುದು ದುರಂತ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಇನ್ನೂ ಮಧ್ಯಪ್ರಾಚ್ಯ, ಇರಾನ್, ಇಸ್ರೇಲ್ ನಲ್ಲಿ ಸಿಲುಕಿರುವ ಕನ್ನಡಿಗರನ್ನು ಯುದ್ಧ ಸಂಪೂರ್ಣ ನಿಲ್ಲುವವರೆಗೂ ಅಲ್ಲಿಂದ ಎಲ್ಲರನ್ನು ಕರೆಸುವುದು ಕಷ್ಟ. ವಿಮಾನ ಹಾರಾಟ ಆರಂಭವಾದ್ರೆ ಎಲ್ಲರೂ ಬಹುಬೇಗ ಸುರಕ್ಷಿತವಾಗಿ ಬರುತ್ತಾರೆ. ವಿಮಾನ ಹಾರಾಟ ಬಂದ್ ಆಗಿರುವ ಕಾರಣ ಸಮಸ್ಯೆಯಾಗಿದೆ.ದುಬೈನಲ್ಲಿ ಕೆಲಸ ಮಾಡುತ್ತಿರುವ ಕನ್ನಡಿಗರು ಸಾಧ್ಯವಾದಷ್ಟು ಕನ್ನಡಿಗರ ಸಹಾಯಕ್ಕೆ ಬಂದಿದ್ದಾರೆ. ನನ್ನ ಜೊತೆಯೂ ಬಹಳಷ್ಟು ಜನ ಸಂಪರ್ಕದಲ್ಲಿದ್ದಾರೆ. ಕೇಂದ್ರ ಸರ್ಕಾರವು ಕೂಡ ಎಲ್ಲಾ ಭಾರತೀಯರ ಸುರಕ್ಷತೆಗೆ ಒತ್ತು ಕೊಟ್ಟಿದೆ. ರಾಜ್ಯ ಸರ್ಕಾರವೂ ಕೇಂದ್ರ ಸರ್ಕಾರದ ಮಾತುಕತೆ ನಡೆಸುತ್ತಿದೆ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
/filters:format(webp)/newsfirstlive-kannada/media/media_files/2026/03/02/phone-tapping-in-karnataka-2026-03-02-16-02-25.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us