/newsfirstlive-kannada/media/media_files/2025/08/25/banu-mushtaq-and-pratap-shimah-2025-08-25-19-19-43.jpg)
ಮೈಸೂರು ದಸರಾ ಉದ್ಘಾಟಿಸಲು ಬಾನು ಮುಷ್ತಾಕ್ಗೆ ಆಹ್ವಾನ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಆಗಿದೆ. ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ವಕೀಲರ ಮೂಲಕ ಪ್ರತಾಪ್ ಸಿಂಹ ಅರ್ಜಿ ಸಲ್ಲಿಸಿದ್ದಾರೆ. ಮೈಸೂರು ದಸರಾ ವಿಶ್ವವಿಖ್ಯಾತ ಹಬ್ಬ. ಆದರೆ ಅವರನ್ನ ಮುಖ್ಯ ಅತಿಥಿಯಾಗಿ ಆಹ್ವಾನ ನೀಡಲಾಗಿದೆ. ಸರ್ಕಾರದ ಆಹ್ವಾನಕ್ಕೆ ತಡೆ ನೀಡುವಂತೆ ಕೋರಿ ಪ್ರತಾಪ್ ಸಿಂಹ ಅರ್ಜಿ ಸಲ್ಲಿಸಿದ್ದಾರೆ.
ಇದನ್ನೂ ಓದಿ:ನಟಿ ಭಾವನಾ ರಾಮಣ್ಣ ಅವರ ಅವಳಿ IVF ಶಿಶುಗಳಲ್ಲಿ ಒಂದು ಮಗು ನಿಧನ
ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು. ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆಯ ಸಂಪ್ರದಾಯವಿದೆ. ಬಾನು ಮುಷ್ತಾಕ್ ಹಿಂದೂ ವಿರೋಧಿ, ಕನ್ನಡ ವಿರೋಧಿ ಭಾವನೆ ಹೊಂದಿದ್ದಾರೆ. ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಬಾನು ಮುಷ್ತಾಕ್ ಅವರ ಆಯ್ಕೆ ಮಾಡಿದೆ.
ಮೈಸೂರಿನ ರಾಜಮನೆತನದವರೂ ಸರ್ಕಾರದ ನಡೆ ವಿರೋಧಿಸಿದ್ದಾರೆ. ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿ ಉಂಟಾಗಿದೆ. ಬಾನು ಮುಷ್ತಾಕ್ರಿಗೆ ನೀಡಿದ ಆಹ್ವಾನಕ್ಕೆ ಹಿಂಪಡೆಯುವಂತೆ ನಿರ್ದೇಶಿಸಬೇಕು ಎಂದು ಕೋರಿ ಮನವಿ ಸಲ್ಲಿಕೆ ಮಾಡಲಾಗಿದೆ.
ಇದನ್ನೂ ಓದಿ:ಕನ್ನಡದ ಸೆಲೆಬ್ರಿಟಿಗಳಿಗೆ ಮತ್ತೆ ಅವಮಾನ.. SIIMA ವೇದಿಕೆ ಮೇಲೆಯೇ ದುನಿಯಾ ವಿಜಿ ಆಕ್ರೋಶ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ