/newsfirstlive-kannada/media/media_files/2025/09/24/sl_bhyrappa_last_rites-2025-09-24-17-42-39.jpg)
ಕನ್ನಡ ಸಾಹಿತ್ಯ ಲೋಕ ಬಡವಾಗಿದೆ. ಅಕ್ಷರ ಲೋಕದ ತತ್ವಜ್ಞಾನಿ, ಸರಸ್ವತಿ ಸಮ್ಮಾನ್ ಪುರಸ್ಕೃತ, ಪದ್ಮಭೂಷಣ ಡಾ.ಎಸ್.ಎಲ್.ಭೈರಪ್ಪ ಇನ್ನು ನೆನಪು ಮಾತ್ರ. ವಯೋ ಸಹಜ ಅನಾರೋಗ್ಯದಿಂದ ಬುಧವಾರ ನಿಧನರಾಗಿದ್ದ 94 ವರ್ಷದ ಹಿರಿಯ ಸಾಹಿತಿ ಇವತ್ತು ಪಂಚಭೂತಗಳಲ್ಲಿ ಲೀನರಾಗಿದ್ದಾರೆ.
ಇಂದು ಬೆಳಗ್ಗೆ ಮೈಸೂರಿನಲ್ಲಿರುವ ಭೈರಪ್ಪ ಅವರ ಮನೆಯಲ್ಲಿ ಅಂತಿಮ ವಿಧಿ ವಿಧಾನ ನಡೆಯಿತು. ನಂತರ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ರುದ್ರ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಿತು. ಅಂತ್ಯಕ್ರಿಯೆಗೂ ಮುನ್ನ ಭೈರಪ್ಪ ಅವರಿಗೆ ರಾಜ್ಯ ಸರ್ಕಾರ ಸಕಲ ಸರ್ಕಾರಿ ಗೌರವ ನೀಡಿತು.
ಮಕ್ಕಳಿಂದ ಅಂತಿಮ ವಿಧಿ ವಿಧಾನ
ಅಂತಿಮ ವಿಧಿ ವಿಧಾನವನ್ನು ತಮ್ಮ ಪುತ್ರರು ಮಾಡಬಾರದು ಎಂದು ಭೈರಪ್ಪ ಅವರು ಬರೆದಿಟ್ಟಿದ್ದರು. ಹೀಗಾಗಿ ಅಗಲಿದ ಅಂತಿಮ ವಿಧಿ ವಿಧಾನ ಯಾರು ನೆರವೇರಿಸುತ್ತಾರೆ ಎಂಬ ಪ್ರಶ್ನೆ ಇತ್ತು. ಆದರೆ ಅಂತಿಮ ಪೂಜೆಯಲ್ಲಿ ಭೈರಪ್ಪ ಅವರ ಇಬ್ಬರು ಪುತ್ರರು ಭಾಗಿಯಾಗಿದ್ದರು. ಪುತ್ರರಾದ ಉದಯ್ ಶಂಕರ್, ರವಿಶಂಕರ್ ಪೂಜೆಯಲ್ಲಿ ಕುಳಿತು ಅಂತಿಮ ಕಾರ್ಯ ನೆರವೇರಿಸಿದರು. ಹಿರಿಯ ಪುತ್ರ ರವಿಶಂಕರ್ ಅವರು ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.
ಅಂತ್ಯಕ್ರಿಯೆ ವೇಳೆ ಭೈರಪ್ಪರ ಹುಟ್ಟೂರಿನ ಜನ, ಕುಟುಂಬಸ್ಥರು ಭಾಗಿಯಾಗಿದ್ದರು. ಸಚಿವರಾದ ಹೆಚ್.ಸಿ.ಮಹದೇವಪ್ಪ, ವೆಂಕಟೇಶ್, ಎಂಎಲ್‌ಸಿ ಶಿವಕುಮಾರ್, ರಾಜಕೀಯ ನಾಯಕರು ಹಾಗೂ ವಿವಿಧ ಕ್ಷೇತ್ರ ಗಣ್ಯರು ಉಪಸ್ಥಿತರಿದ್ದು, ಕಂಬನಿ ಮಿಡಿದರು.
ಇದನ್ನೂ ಓದಿ:ಪಿಜಿಯಲ್ಲಿ ದುರಂತ ಅಂತ್ಯಕಂಡ 17 ವರ್ಷದ ವಿದ್ಯಾರ್ಥಿನಿ, ಪೋಷಕರಿಂದ ಅನುಮಾನ
ಸಾಹಿತ್ಯ ಪ್ರಪಂಚದಲ್ಲಿ ಹೊಸದೊಂದಕ್ಕೆ ಸಾಕ್ಷಿಯಾಗ್ತಿದ್ದ ಎಲ್.ಎಸ್ ಭೈರಪ್ಪ ಅವ್ರು ಬರೆದ ಬರಹಗಳಿಗೆ ಅವರೇ ಸಾಟಿ. ಕಾಂದಬರಿಗಳ ಮೂಲಕ ಕನ್ನಡದ ಕೀರ್ತಿ ಪತಾಕೆಯನ್ನು ಜಗದಗಲ ಹಾರಿಸಿದ ಆ ಚೇತನ ಇನ್ನು ನೆನಪು ಮಾತ್ರ. 94ನೇ ವಯಸ್ಸಿನಲ್ಲಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದರು. ಭೈರಪ್ಪನವರ ನಿಧನದಿಂದ ಕನ್ನಡ ಸಾರಸ್ವತ ಲೋಕ ಅಕ್ಷರಶಃ ಬಡವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.